Wednesday, November 19, 2025
21.2 C
Bengaluru
Google search engine
LIVE
ಮನೆ#Exclusive NewsTop NewsTVK ಪಕ್ಷದ ರ‍್ಯಾಲಿಯಲ್ಲಿ ಕಾಲ್ತುಳಿತ ದುರಂತ: ಮದ್ರಾಸ್​​​ ಹೈಕೋರ್ಟ್​​​​​​ ಮೆಟ್ಟಿಲೇರಿದ ವಿಜಯ್​​

TVK ಪಕ್ಷದ ರ‍್ಯಾಲಿಯಲ್ಲಿ ಕಾಲ್ತುಳಿತ ದುರಂತ: ಮದ್ರಾಸ್​​​ ಹೈಕೋರ್ಟ್​​​​​​ ಮೆಟ್ಟಿಲೇರಿದ ವಿಜಯ್​​

ಚೆನ್ನೈ: ಟಿವಿಕೆ ಪಕ್ಷದ ನಾಯಕ ವಿಜಯ್​ ದಳಪತಿ ಕರೂರುನಲ್ಲಿ ನಡೆದ ರ್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿ ಸುಮಾರು 40 ಜನರು ಸಾವನ್ನಪ್ಪಿದ್ದಾರೆ.. ಕರೂರು ಕಾಲ್ತುಳಿತ ಪ್ರಕರಣ ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದ್ದು, ರಾಜಕೀಯ ಕೆಸರೆರಚಾಟ ಮುಂದುವರಿದೆ. ಟಿವಿಕೆ ಮತ್ತು ಆಡಳಿತ ಪಕ್ಷದ ನಡುವೆ ರಾಜಕೀಯ ವಾಗ್ಯುದ್ಧ ಶುರುವಾಗಿದೆ. ಕಾಲ್ತುಳಿತ ದುರಂತದ ಬಗ್ಗೆ ಸ್ವತಂತ್ರ ತನಿಖೆ ಅಥವಾ ಸಿಬಿಐ ತನಿಖೆ ನಡೆಸಬೇಕೆಂದು ನಟ ಹಾಗೂ ವಿಜಯ್‌ ದಳಪತಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ ನಡೆಯಲಿದೆ.

ವಿಜಯ್ ಅವರ ಪರವಾಗಿ ತಮಿಳಗ ವೆಟ್ರಿ ಕಳಗಂ ಪಕ್ಷದ ಕಾನೂನು ತಂಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮದ್ರಾಸ್‌ ಹೈಕೋರ್ಟ್‌ನಲ್ಲಿ ನಡೆಯಲಿದೆ. ಈ ನಡುವೆ ರ‍್ಯಾಲಿಗಳಿಗೆ ಇನ್ಮುಂದೆ ಪ್ರೋಟೋಕಾಲ್‌ ತಯಾರಿಸುವವರೆಗೆ ನಟ ವಿಜಯ್‌ ರ‍್ಯಾಲಿಗೂ ಅನುಮತಿ ನೀಡದಂತೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯೂ ಇಂದೇ ವಿಚಾರಣೆಗೆ ಬರುವ ಸಾಧ್ಯತೆ.

ಈ ಕುರಿತು ಮಾತನಾಡಿರುವ ಟಿವಿಕೆ ಪಕ್ಷದ ವಕೀಲ ಅರಿವಳಗನ್‌, ಕರೂರಿನಲಿ ನಡೆದ ಘಟನೆ ಹಿಂದೆ ಕ್ರಿಮಿನಲ್‌ ಪಿತೂರಿ ಇದೆ. ಆದ್ದರಿಂದ ನಾವು ರಾಜಕೀಯ ಸಂಸ್ಥೆಯ ಮೂಲಕ ತನಿಖೆ ಮಾಡೋದು ಬೇಡ. ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದೇವೆ. ನ್ಯಾಯಾಲಯವೇ ವಿಶೇಷ ತನಿಖಾ ತಂಡವನ್ನ ರಚಿಸಬೇಕು. ಇಲ್ಲದಿದ್ದರೆ ಪ್ರಕರಣವನ್ನ ಸಿಬಿಐಗೆ ವಹಿಸಬೇಕು ಅಂತ ಆಗ್ರಹಿಸಿದ್ದಾರೆ,

ಇನ್ನೂ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕರೂರು ಸರ್ಕಾರಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಶಾರದಾ ಮೃತಪಟ್ಟಿದ್ದಾರೆ. ಈಗಾಗಲೇ ಪ್ರಕರಣ ದಾಖಲಿಸಿಕೊಂಡು ಪ್ರಾಥಮಿಕ ತನಿಖೆ ಆರಂಭಿಸಿರುವ ಪೊಲೀಸರು ಕಾಲ್ತುಳಿತದ ಸ್ಥಳದಲ್ಲಿರುವ ಎಲ್ಲಾ ಸಿಸಿಕ್ಯಾಮರಾ, ಡ್ರೋನ್ ವಿಡಿಯೋ ಹಾಗೂ ಮೊಬೈಲ್‌ಗಳಲ್ಲಿ ರೆಕಾರ್ಡ್ ಮಾಡಿದ್ದ ವಿಡಿಯೋಗಳನ್ನ ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments