Monday, December 8, 2025
17.4 C
Bengaluru
Google search engine
LIVE
ಮನೆರಾಜಕೀಯಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತದಲ್ಲಿ ಮತದಾನ

ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತದಲ್ಲಿ ಮತದಾನ

ನವದೆಹಲಿ: ಬಿಹಾರ ವಿಧಾನಸಭೆಯ ದಿನಾಂಕ ನಿಗದಿಯಾಗಿದೆ.. ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್​ ಕುಮಾರ್ ಅವರು ಮಾಹಿತಿ ನೀಡಿದ್ಧಾರೆ.. ಬಿಹಾರದಲ್ಲಿ ಒಟ್ಟು 243 ವಿಧಾನಸಭಾ ಕ್ಷೇತ್ರಗಳಿದ್ದು, ನವೆಂಬರ್ 6 ಮತ್ತು 11ರಂದು 2 ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ನವೆಂಬರ್ 14ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಸುದ್ದಿಗೋಷ್ಠಿಯಲ್ಲಿ ಚುನಾವಣೆಯ ವಿವರಗಳನ್ನು ತಿಳಿಸಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು, ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಒಟ್ಟು ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದ ಮತದಾನ ನವೆಂಬರ್ 6ರಂದು ನಡೆದರೆ, ಎರಡನೇ ಹಂತದ ಮತದಾನ 11ರಂದು ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ನಡೆಯಲಿದೆ ಎಂದು ಹೇಳಿದರು.

243 ಸ್ಥಾನಗಳನ್ನು ಹೊಂದಿರುವ ಬಿಹಾರ ವಿಧಾನಸಭೆಯಲ್ಲಿ ಬಹುಮತಕ್ಕಾಗಿ 122 ಸ್ಥಾನ ಗೆಲ್ಲಬೇಕಾಗಿದೆ. ಸದ್ಯ ನಿತೀಶ್ ಕುಮಾರ್ ನೇತೃತ್ವದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿ ಸರ್ಕಾರವಿದೆ. 138 ಸ್ಥಾನಗಳನ್ನು ಎನ್ ಡಿಎ ಹೊಂದಿದೆ.
ವಿಹಾರದಲ್ಲಿ ವಿಶೇಷ ಮತದಾರಪಟ್ಟಿ ಪರಿಷ್ಕರಣೆ ಕೈಗೊಳ್ಳಲಾಗಿದ್ದು, ಇದು ಹಲವಾರು ವಿವಾದಕ್ಕೆ ಕಾರಣವಾಗಿತ್ತು. ಬಿಹಾರ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ 17 ಹೊಸ ಉಪಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಆಯೋಗ ಹೇಳಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments