ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ ನಡೀತಿದ್ದ ಜಾಲಿವುಡ್ ಗೆ ಬೀಗ ಹಾಕಿದ ಕ್ರಮದ ಬಗ್ಗೆ ಭಾರೀ ಚರ್ಚೆಯಾಗ್ತಿದೆ. ಇದರ ನಡುವೆ ಬಿಗ್ ಬಾಸ್ ಬಂದ್ ಮಾಡಿಸಿದ ನಟ್ಟು-ಬೋಲ್ಟ್ ಮಿನಿಸ್ಟರ್ ಡಿಕೆ ಶಿವಕುಮಾರ್ ಸೇಡು ತೀರಿಸಿಕೊಂಡಿದ್ದಾರೆ ಎಂದು ಜೆಡಿಎಸ್ ಆರೋಪ ಮಾಡಿತ್ತು.
ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಜೆಡಿಎಸ್‌ನವರ ನಟ್ಟು ಬೋಲ್ಟ್ ಆರೋಪಕ್ಕೆ ಮಾತನಾಡಿದ ಅವರು, ಅವರಿಗೆ ಶಕ್ತಿ ಬೇಕು ಎಂದಾಗ ನನ್ನ ಹೆಸರು ತೆಗೆದುಕೊಳ್ಳುತ್ತಾರೆ. ಜಾಲಿವುಡ್ ಸ್ಟುಡಿಯೋ ಉದ್ಘಾಟನೆಯನ್ನು ನಾನೇ ಮಾಡಿದ್ದೇನೆ. ಕುಮಾರಸ್ವಾಮಿಯಾದ್ರೂ ಆರೋಪ ಮಾಡಲಿ. ಮೇಲೆ ಇರುವವರನ್ನು ಕರಕೊಂಡು ಬಂದರೂ ನಾನು ತಲೆಕೆಡೆಸಿಕೊಳ್ಳುವುದಿಲ್ಲ ಎಂದರು.
ಬಿಗ್ ಬಾಸ್ ಮನೆಗೆ ಬೀಗ ಹಾಕಿರುವ ಬಗ್ಗೆ ನಾವು ವಿಚಾರಣೆ ನಡೆಸಿದ್ದೇನೆ. ಜನರಿಗೆ ಮನರಂಜನೆ ನೀಡಲು ಕೋಟ್ಯಂತರ ರೂಪಾಯಿ ಖರ್ಚು ಮಾಡಿರುತ್ತಾರೆ. ಜನರಿಗೆ ಇಲ್ಲಿ ಮನರಂಜನೆಯೂ ಮುಖ್ಯ, ಸಣ್ಣ ಪುಟ್ಟ ತಪ್ಪುಗಳನ್ನು ಸರಿಪಡಿಸಿಕೊಳ್ಳಿ ಎಂದು ಹೇಳಿದ್ದೇನೆ. ಬಿಗ್ ಬಾಸ್ ಕಾರ್ಯಕ್ರಮ ನಡೆಸಲು ಅನುಮತಿ ನೀಡುವಂತೆಯೂ ಡಿಸಿಗೆ ಸೂಚನೆ ನೀಡಿರುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.


