ದೇಶ/ವಿದೇಶಸುದ್ದಿ

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 6 ಮಂದಿ ಸಾ*ವು.. ಹಲವರಿಗೆ ಗಂಭೀರ ಗಾಯ

ಆಂಧ್ರಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅಘಡದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 8 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿಯಲ್ಲಿ ನಡೆದಿದೆ..

ರಾಯವರಂ ಮಂಡಲದ ಕೊಮರಿಪಲೆಂ ಗ್ರಾಮದಲ್ಲಿರುವ ಲಕ್ಷ್ಮಿ ಗಣಪತಿ ಪಟಾಕಿ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, ಕಾರ್ಖಾನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕ ವಸ್ತುಗಳನ್ನು ಶೇಖರಿಸಿಟ್ಟಿದ್ದು ಈ ವೇಳೆ ಬೆಂಕಿ ಅವಘಡ ಸಂಭವಿಸಿ ಹೆಚ್ಚಿನ ಅನಾಹುತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಬೆಂಕಿ ನಂದಿಸುವ ಕಾರ್ಯವನ್ನು ಆರಂಭಿಸಿದ್ದಾರೆ. ಮೃತರು ಮತ್ತು ಗಾಯಗೊಂಡವರನ್ನು ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರು ಎಂದು ಗುರುತಿಸಲಾಗಿದೆ ಎಂದು ಜಿಲ್ಲಾ ಡಿಎಸ್ಪಿ ರಾಹುಲ್ ಮೀನಾ ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button