ರಾಜ್ಯಸಿನಿಮಾಸುದ್ದಿ

ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಕೇಸ್: 11 ಆರೋಪಿಗಳ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ನಟಿ ರಮ್ಯಾಗೆ ಸೋಷಿಯಲ್​​​​​​ ಮೀಡಿಯದಲ್ಲಿ ನಟ ದರ್ಶನ್​ ಅಭಿಮಾನಿಗಳು ಅಶ್ಲೀಲ ಕಾಮೆಂಟ್​ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಸೈಬರ್​ ಪೊಲೀಸರು 380 ಪುಟಗಳ ಚಾರ್ಜ್​​ ಶೀಟ್​ ಸಲ್ಲಿಕೆ ಮಾಡಿದ್ದಾರೆ..

45ನೇ ಎಸಿಜೆಎಂ ಕೋರ್ಟ್‌ಗೆ 11 ಆರೋಪಿಗಳ ಮೇಲೆ 380 ಪುಟಗಳ ಸುಧೀರ್ಘ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ. ಈ ಚಾರ್ಜ್‌ಶೀಟ್‌ನಲ್ಲಿ ಅಶ್ಲೀಲ ಸಂದೇಶಗಳ ಸ್ಕ್ರೀನ್‌ಶಾಟ್‌ಗಳು, ಆರೋಪಿಗಳ ಐಪಿ ವಿಳಾಸಗಳು, ಮತ್ತು ಇತರ ಸಾಕ್ಷ್ಯಾಧಾರಗಳನ್ನು ಸಿಬಿಬಿ ಪೊಲೀಸರು ಸಂಗ್ರಹಿಸಿ ಸಿದ್ಧಪಡಿಸಿದ್ದಾರೆ.

60 ದಿನಗಳ ಡೆಡ್ ಲೈನ್ ಮುಗಿಯುತ್ತಾ ಬಂದ ಹಿನ್ನೆಲೆ ದೋಷಾರೋಪಣ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಅಶ್ಲೀಲ ಕಮೆಂಟ್ ಹಾಕಿದ ಇನ್ನೂ 6 ಆರೋಪಿಗಳು ಪೊಲೀಸರಿಗೆ ಸಿಕ್ಕಿಲ್ಲ. ಆ ಆರೋಪಿಗಳು ಸಿಕ್ಕ ಬಳಿಕ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.

ಅಶ್ಲೀಲ ಕಮೆಂಟ್ ಹಾಕಿದ ಇನ್ನೂ ನಾಲ್ವರು ಆರೋಪಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಚಾರ್ಜ್ ಶೀಟ್ ಬೆನ್ನಲ್ಲೇ ಶೀಘ್ರದಲ್ಲೇ ಟ್ರಯಲ್ ಆರಂಭವಾಗಲಿದೆ.

Comments (0)

Your email address will not be published. Required fields are marked *

Back to top button