ರಾಜಕೀಯರಾಜ್ಯಸುದ್ದಿ

ಮೂರ್ನಾಲ್ಕು ದಿನಗಳಲ್ಲಿ ಡಿಸ್ಚಾರ್ಜ್ ಆಗ್ತಾರೆ- ಎಚ್​. ಡಿ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು ಅನಾರೋಗ್ಯಕ್ಕೀಡಾಗಿ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಈ ಬಗ್ಗೆ ಹೆಚ್​.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ಧಾರೆ.. ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇನ್ನು ಮೂರ್ನಾಲ್ಕು ದಿನದಲ್ಲಿ ಅವರು ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಿದ್ದಾರೆ.

ದೇವೇಗೌಡರ ಆರೋಗ್ಯ ವಿಚಾರಿಸಲು ಇಂದು ದೆಹಲಿಯಿಂದ ಬೆಂಗಳೂರಿಗೆ ಬಂದ ಎಚ್ ಡಿ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇವರ ಆಶೀರ್ವಾದದಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ವೈದ್ಯರ ಚಿಕಿತ್ಸೆಯಿಂದ ಗೌಡರ ಆರೋಗ್ಯ ಸಮಸ್ಯೆಗಳು ಪರಿಹಾರವಾಗಿದೆ. ಅಭಿಮಾನಿಗಳು ಕಾರ್ಯಕರ್ತರು ಆತಂಕಪಡುವ ಅವಶ್ಯಕತೆ ಇಲ್ಲ. ಇನ್ನೊಂದು ಮೂರ್ನಾಲ್ಕು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಹೇಳಿದರು.

ಇನ್ನು ದೇವೇಗೌಡರು ದಾಖಲಾಗುತ್ತಿದ್ದಂತೆ ಪುತ್ರ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಆಸ್ಪತ್ರೆಗೆ ದೌಡಾಯಿಸಿದ್ದರು. ತಂದೆಯ ಆರೋಗ್ಯ ವಿಚಾರಿಸಿ ಮಾಧ್ಯಮಗಳಿಗೆ ಯಾವುದೇ ಮಾಹಿತಿ ನೀಡದೇ ಹಿಂದಿರುಗಿದ್ದರು. ನಂತರ ಆಪ್ತರಿಂದ ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಸಂದೇಶ ರವಾನಿಸಿದ್ದರು.

Comments (0)

Your email address will not be published. Required fields are marked *

Back to top button