
ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಕಳೆದ ವಾರ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ ಅವರ ಆರೋಗ್ಯ ಇದೀಗ ಸ್ಥಿರವಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಬೆಂಗಳೂರು: ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಪದ್ಮನಾಭನಗರದ ನಿವಾಸಕ್ಕೆ ತೆರಳಿದ್ಧಾರೆ..
ಅನಾರೋಗ್ಯದ ಹಿನ್ನೆಲೆ ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ದೇವೇಗೌಡ ಅವರಿಗೆಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರ ಸೂಚನೆ ಮೇರೆಗೆ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ದೇವೇಗೌಡರ ನಿವಾಸಕ್ಕೆ ಬಿಜೆಪಿ ನಾಯಕರಾದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಇನ್ನಿತರ ಬಿಜೆಪಿ ನಾಯಕರು ಆರೋಗ್ಯ ವಿಚಾರಿಸಿದ್ದಾರೆ.




