ಬೆಂಗಳೂರು: RSS ಕಾರ್ಯಕ್ರಮಗಳನ್ನು ನಿಷೇಧ ಮಾಡಬೇಕು ಎಂದು ಸಿಎಂ ಸಿದ್ದಾರಮಯ್ಯ ಅವರಿಗೆ ಪತ್ರ ಬರೆದಿರುವ ವಿಚಾರ ನನಗೆ ಗೊತ್ತಿಲ್ಲ. ಗೃಹ ಇಲಾಖೆಗೆ ಆ ಪತ್ರ ಬಂದರೆ ಪರಿಶೀಲನೆ ಮಾಡುತ್ತೇವೆ ಅಂತ ಸಚಿವ ಪರಮೇಶ್ವರ್ ಹೇಳಿದ್ಧಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪತ್ರ ಬರೆದಿರೋದು ಎಲ್ಲವೂ ನಿಮಗೆ ಗೊತ್ತಿದೆಯಲ್ಲ. ನೀವೇ ಹೇಳಿದಂತೆ ಅವರು ಪತ್ರ ಬರೆದಿದ್ದಾರೆ. ಶಾಲೆ, ಸರ್ಕಾರಿ ಜಾಗದಲ್ಲಿ ಬೇಡ ಅಂತ ಹೇಳಿದ್ದಾರೆ ಅದರ ಬಗ್ಗೆ ನನಗೆ ಗೊತ್ತಿಲ್ಲ. ಸಿಎಂ ಅವರು ಅದರ ಬಗ್ಗೆ ಚರ್ಚೆ ಮಾಡ್ತಾರೇನೋ, ಸಿಎಸ್ ಅವರು ನಿರ್ಧಾರ ತೆಗೆದುಕೊಳ್ತಾರೆ ಅಂತ ಹೇಳಿದರು.
ಈ ಬಗ್ಗೆ ನಮ್ಮ ಇಲಾಖೆಗೆ ಬಂದರೆ ಪರಿಶೀಲನೆ ಮಾಡ್ತೇವೆ. ಅದರ ಸಾಧಕ ಬಾಧಕ ಪರಿಶೀಲನೆ ಮಾಡ್ತೇವೆ. ದೂರು ಬಂದರೆ ಮಾಡಬಹುದು. ಎಬಿವಿಪಿ ಕಾರ್ಯಕ್ರಮದಲ್ಲಿ ನಾನು ಎಲ್ಲಿ ಭಾಗಿಯಾಗಿದ್ದೆ? ಮೆರವಣಿಗೆ ಬರ್ತಿತ್ತು ಕೈಮುಗಿದೆ. ಅಬ್ಬಕ್ಕನಿಗೆ ಕೈಮುಗಿಯೋದು ತಪ್ಪೇ?ಅದನ್ನೇ ತಪ್ಪು ಅಂದ್ರೆ ಹೇಗೆ? ಅವತ್ತೇ ಕ್ಲಾರಿಪಿಕೇಶನ್ ಕೊಟ್ಟಿದ್ದೇನೆ.
ಇವತ್ತು ನಾನು ಕೊಡ್ತಿದ್ದೇನೆ. ನನಗೆ ಪರ್ಮಿಷನ್ ಕೇಳಿದ್ರೆ ಪೊಲೀಸರು ಕೊಡ್ತಾರೆ. ಸರ್ಕಾರ ಬ್ಯಾನ್ ಮಾಡಿದ್ರೆ ಕೊಡಲ್ಲ. ಇನ್ನೂ ಏನು ಬ್ಯಾನ್ ಆಗಿಲ್ಲವಲ್ಲ. ನಮ್ಮ ಇಲಾಖೆಗೆ ಫಾರ್ವರ್ಡ್ ಮಾಡಬೇಕು. ಆಗ ನಾವು ನೋಡ್ತೇವೆ ಅಂತ ತಿಳಿಸಿದರು.


