ಮಳೆರಾಜ್ಯಸುದ್ದಿ

ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್​​​ 18ರವರೆಗೆ ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಯನ್ನು ನೀಡಿದೆ.. ಬಂಗಾಳ ಉಪಮಹಾಸಾಗರದಲ್ಲಿ ನೈರುತ್ಯ ಮಳೆಯ ಮಾರುತ ಚುರುಕುಗೊಂಡಿದ್ದು, ರಾಜ್ಯದಲ್ಲಿ ಮತ್ತೆ ಅಲರ್ಟ್​​ ಮುಂದುವರೆದಿದೆ..

ರಾಜ್ಯದ ಜನರು ಎಚ್ಚರಿಕೆಯಿಂದ ಇರಬೇಕು. ರಾಜ್ಯದ ಬಹುತೇಕ ಕಡೆಗಳಲ್ಲಿ ಇನ್ನು ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಎಲ್ಲಾ ಜಿಲ್ಲೆಗೂ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಂಜೆ ವೇಳೆಗೆ ಬೆಂಗಳೂರಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆ ಬೆಂಗಳೂರಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ದಕ್ಷಿಣ ಕರ್ನಾಟಕದ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಇದೆ. ಕರಾವಳಿ ಭಾಗದ ಉತ್ತರ ಕನ್ನಡದಲ್ಲಿ ಸಾಮಾನ್ಯ ಮಳೆ. ಆದರೆ, ನಾಲ್ಕು ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯ ಎಚ್ಚರಿಕೆ ಇದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಭಾಗಗಳಲ್ಲಿಯೂ ಎಲ್ಲೋ ಅಲರ್ಟ್​ ಘೋಷಣೆ ಮಾಡಿದೆ.

Comments (0)

Your email address will not be published. Required fields are marked *

Back to top button