Thursday, November 20, 2025
19.9 C
Bengaluru
Google search engine
LIVE
ಮನೆರಾಜಕೀಯRSS ಸಂಘಟನೆಗೆ ನಿರ್ಬಂಧ; ನಾವು ಯಾರನ್ನು ಟಾರ್ಗೆಟ್ ಮಾಡಿಲ್ಲ- ಸಿದ್ದರಾಮಯ್ಯ

RSS ಸಂಘಟನೆಗೆ ನಿರ್ಬಂಧ; ನಾವು ಯಾರನ್ನು ಟಾರ್ಗೆಟ್ ಮಾಡಿಲ್ಲ- ಸಿದ್ದರಾಮಯ್ಯ

ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಸಂಘ-ಸಂಸ್ಥೆಗಳ ಚಟುವಟಿಕೆಗಳ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶವು ಯಾವುದೇ ನಿರ್ದಿಷ್ಟ ಸಂಘಟನೆಯನ್ನು ಗುರಿಯಾಗಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಯಾವುದೇ ಸಂಘ-ಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ನೀಡಬಾರದು ಎಂಬುದೇ ನಮ್ಮ ನಿಲುವು. ಈ ಆದೇಶವನ್ನು ಯಾವುದೇ ನಿರ್ದಿಷ್ಟ ಸಂಘಟನೆಯ ವಿರುದ್ಧ ಗುರಿಯಾಗಿಸಿಲ್ಲ ಎಂದರು. ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಆದೇಶ ಹೊರಡಿಸಿದ್ದರು. ಈ ಆದೇಶ ಆರ್‌ಎಸ್‌ಎಸ್‌ಗೂ ಅನ್ವಯವಾಗುತ್ತದೆ. ಅದನ್ನೇ ನಾವು ಈಗ ನಾವು ಜಾರಿಗೊಳಿಸಿದ್ದೇವೆ, ಆಗ ವಿರೋಧ ಮಾಡದವರು ಈಗ ಯಾಕೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಟಾರ್ಗೆಟ್ ಆರ್ ಎಸ್ ಎಸ್ ಅಲ್ಲವೇ ಅಲ್ಲ, ಶಾಲಾ ಆವರಣದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೇ ಸುತ್ತೋಲೆ ಹೊರಡಿಸಿದ್ದರು. ಅದನ್ನೇ ನಾವೀಗ ಜಾರಿಗೊಳಿಸುತ್ತಿದ್ದೇವೆ. ಸರ್ಕಾರದ ಆದೇಶ ಕೇವಲ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಮಾತ್ರವಲ್ಲ, ಎಲ್ಲಾ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೂ ಅನ್ವಯವಾಗುತ್ತದೆ. ಸರ್ಕಾರಿ ಶಾಲೆ, ಆಟದ ಮೈದಾನ, ಸರ್ಕಾರಿ ಸ್ಥಳಗಳು, ಉದ್ಯಾನವನಗಳಲ್ಲಿ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಎಲ್ಲಾ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ ಎಂದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments