ಚಿತ್ರದುರ್ಗ : ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸ ಯಳನಾಡುನಲ್ಲಿ ಘಟನೆ ನಡೆದಿದೆ.

ಹಿರಿಯೂರು ತಾಲೂಕಿನ ಹೊಸ ಯಳನಾಡು ಗ್ರಾಮ ಪಂಚಾಯತಿಯಲ್ಲಿ ಬಿಲ್ ಕಲೆಕ್ಟರ್ ಆಗಿ ಆನಂದ ಎಂಬುವವರು ಕಾರ್ಯನಿರ್ವಹಿಸುತ್ತಿದ್ದನು. ಇಂದಿರಾ ಆವಾಸ್ ಯೋಜನೆಯ ಮನೆ ಬಿಲ್ ಮಂಜೂರಾತಿಗೆ ಪಾಂಡುರಂಗ ಎಂಬವರಿಗೆ 25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ. ಪಾಂಡುರಂಗ ಎಂಬುವವರಿಂದ ಲೋಕಾಯುಕ್ತಕ್ಕೆ ದೂರು ನೀಡಿದ ಹಿನ್ನೆಲೆ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾನೆ. ಲೋಕಾಯುಕ್ತ ಎಸ್ಪಿ ವಾಸುದೇವರಾವ್, ಡಿವೈಎಸ್ಪಿ ಮೃತ್ಯುಂಜಯ ಬಣಕಾರ್ ನೇತೃತ್ವದಲ್ಲಿ ದಾಳಿ ನಡೆದಿದೆ.


