ಹಾಸನ: ನಟ ಧ್ರುವ ಸರ್ಜಾ ಪ್ರಸಿದ್ಧ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ.. ತಂದೆ ಹಾಗೂ ಸ್ನೇಹಿತರ ಜೊತೆ ಹಾಸನಾಂಬ ದೇವಾಲಯಕ್ಕೆ ಆಗಮಿಸಿದ ಧ್ರುವ ಸರ್ಜಾ ದೇವಿಯ ದರ್ಶನ ಪಡೆದಿದ್ದಾರೆ.
ಹಾಸನಾಂಬ ಜಾತ್ರಾ ಮಹೋತ್ಸವದ ಸಾರ್ವಜನಿಕ ದರ್ಶನಕ್ಕೆ ಇಂದು ಕೊನೆಯ ದಿನವಾಗಿದೆ. ಈ ಶುಭ ಸಂದರ್ಭದಲ್ಲಿ ಖ್ಯಾತ ಚಲನಚಿತ್ರ ನಟ ಧ್ರುವ ಸರ್ಜಾ ಅವರು ಕುಟುಂಬ ಸಮೇತ ಹಾಸನಾಂಬ ದೇವಿಯ ದಿವ್ಯ ದರ್ಶನ ಪಡೆದರು.
ಬೆಳಗ್ಗೆ 6 ಗಂಟೆಯಿಂದ ದೇವಿ ದರ್ಶನ ಆರಂಭವಾಗಿದ್ದು, ಸರತಿ ಸಾಲುಗಳಲ್ಲಿ ನಿಂತು ಸಹಸ್ರಾರು ಭಕ್ತರು ದೇವಿ ದರ್ಶನ ಪಡೆಯುತ್ತಿದ್ದಾರೆ. ಧರ್ಮ ದರ್ಶನ, 1000 ರೂ., 300 ರೂ. ಹಾಗೂ ವಿಶೇಷ ದರ್ಶನದ ಸರತಿ ಸಾಲುಗಳಲ್ಲಿ ಜನಜಂಗುಳಿ ಉಂಟಾಗಿದೆ. ಇಂದು ರಾತ್ರಿ 7ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಗರ್ಭಗುಡಿಯ ಬಾಗಿಲು ಬಂದ್ ಆಗಿರಲಿದೆ. ರಾತ್ರಿ 7 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದೇವಿ ದರ್ಶನ ಇರುವುದಿಲ್ಲ. ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಬೆಳಗ್ಗೆ 5 ಗಂಟೆಯವರೆಗೆ ಸ್ಥಳೀಯರಿಗೆ ಹಾಗೂ ಸಾರ್ವಜನಿಕರಿಗೆ ದರ್ಶನವಿರಲಿದೆ. ನಾಳೆ ಶಾಸ್ತ್ರೋಕ್ತವಾಗಿ ಹಾಸನಾಂಬ ದೇವಿ ಗರ್ಭಗುಡಿ ಬಾಗಿಲು ಮುಚ್ಚಲಿದೆ.


