Tuesday, March 3, 2026
20.8 C
Bengaluru
Google search engine
LIVE
ಮನೆರಾಜ್ಯಡಿಜೆ ಹಳ್ಳಿ ಇನ್ಸ್​ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ: ಖಾಸಗಿ ಫೋಟೋ ಇಟ್ಟುಕೊಂಡು ಮಹಿಳೆಗೆ ಬೆದರಿಕೆ

ಡಿಜೆ ಹಳ್ಳಿ ಇನ್ಸ್​ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ: ಖಾಸಗಿ ಫೋಟೋ ಇಟ್ಟುಕೊಂಡು ಮಹಿಳೆಗೆ ಬೆದರಿಕೆ

ಬೆಂಗಳೂರು: ಡಿ.ಜೆ ಹಳ್ಳಿ ಇನ್ಸ್​ಪೆಕ್ಟರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದಾರೆ.. ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಡಿ.ಜೆ ಹಳ್ಳಿ ಪೊಲೀಸ್​ ಠಾಣೆಯ ಇನ್ಸ್ಪೆಕ್ಟರ್​​​​​​​​​ ಸುನೀಲ್​​​ ವಿರುದ್ಧ ಮಹಿಳೆ ಆರೋಪ ಮಾಡಿದ್ದಾರೆ..

ಬೆಂಗಳೂರಿನ ಡಿಜೆ ಹಳ್ಳಿ ಠಾಣೆಯ ಇನ್ಸ್​ಪೆಕ್ಟರ್ ರಿಜಿಸ್ಟರ್ ಸುನಿಲ್ ಅವರು ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿದ್ದು, 1 ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಲ್ಲದೇ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ನಮ್ಮ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದು, ನ್ಯಾಯಕ್ಕಾಗಿ ಪೊಲೀಸ್ ಮಹಾನಿರ್ದೇಶಕರ ಮೊರೆ ಹೋಗಿದ್ದಾರೆ.

ಸದ್ಯ ಸಂತ್ರಸ್ತೆ ಮಹಿಳೆ, ಡಿಜಿ ಹಳ್ಳಿ ಇನ್ಸ್​ಪೆಕ್ಟರ್ ಸುನಿಲ್ ವಿರುದ್ಧ ಪೊಲೀಸ್ ಮಹಾನಿರ್ದೇಶಕರ ಕಚೇರಿ ಮೆಟ್ಟಿಲೇರಿದ್ದು, ನ್ಯಾಯಾ ಕೊಡಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments