ಹೈದರಾಬಾದ್: ಆಂಧ್ರದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡು ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ..
ಹೈದರಾಬಾದ್-ಬೆಂಗಳೂರು ಹೆದ್ದಾರಿಯ ಚಿನ್ನಟೆಕುರು ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಶುಕ್ರವಾರ ಬಳಗಿನ ಜಾವ 3 ಗಂಟೆಯ ವೇಳೆಗೆ ವೇಗವಾಗಿ ಬಂದ ಬೈಕ್ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ನಂತರ ಬೈಕ್ ಬಸ್ಸಿನ ಕೆಳಗಡೆಯಿಂದ ಮುಂದಕ್ಕೆ ಹೋಗಿ ಇಂಧನ ಟ್ಯಾಂಕ್‌ಗೆ ಬಡಿದಿದೆ. ಹಿಂಭಾಗದಲ್ಲಿರುವ ಇಂಧನ ಟ್ಯಾಂಕ್‌ಗೆ ಬೈಕ್ ಡಿಕ್ಕಿ ಬಡಿದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ.
ಅದು ಇಡೀ ಬಸ್ ಅನ್ನೇ ಆವರಿಸಿತ್ತು. ಬೈಕ್ ಸವಾರ ಕೂಡ ಸಾವನ್ನಪಿರಬಹುದು ಎಂದು ಅಂದಾಜಿಸಲಾಗಿದೆ. ಆ ಸಮಯದಲ್ಲಿ ಎಲ್ಲಾ ಪ್ರಯಾಣಿಕರು ಮಲಗಿದ್ದರು.
ಬಸ್ ಚಾಲಕ ಬದಲಿ ಚಾಕನನ್ನು ಎಬ್ಬಿಸಿ ಪ್ರಯಾಣಿಕರನ್ನು ಬಸ್ನಿಂದ ಕೆಳಗೆ ಇಳಿಸುವ ಪ್ರಯತ್ನ ಮಾಡಿದ್ದಾರೆ. ವೋಲ್ವೊ ಬಸ್ ಆದ ಹಿನ್ನೆಲೆಯಲ್ಲಿ ಬೆಂಕಿ ಕೂಡ ಬೇಗ ಹತ್ತಿತ್ತು, ಜತೆಗೆ ಕಿಟಕಿಗಳು ಮುಚ್ಚಿದ್ದ ಪರಿಣಾಮ ಕಿಟಕಿಯನ್ನು ಒಡೆದು ಪ್ರಯಾಣಿಕರನ್ನು ಹೊರತರಲಾಯಿತು. ಅಷ್ಟರೊಳಗೆ ಹಲವು ಪ್ರಯಾಣಿಕರು ಉಸಿರುಚೆಲ್ಲಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಲು ಮತ್ತು ಅವಶೇಷಗಳನ್ನು ಹೊರತೆಗೆಯಲು ಹೆಣಗಾಡಿದವು. ಅಧಿಕಾರಿಗಳು ಇನ್ನೂ ಸಾವಿನ ಸಂಖ್ಯೆಯನ್ನು ದೃಢಪಡಿಸಿಲ್ಲ, ಆದರೆ ವಿನಾಶದ ಪ್ರಮಾಣವು ಹೆಚ್ಚಿನ ಸಂಖ್ಯೆಯ ಸಾವುನೋವುಗಳನ್ನು ಸೂಚಿಸುತ್ತದೆ.
ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದರು ಮತ್ತು ಗಾಯಗೊಂಡವರಿಗೆ ತ್ವರಿತ ಪರಿಹಾರ ಮತ್ತು ವೈದ್ಯಕೀಯ ನೆರವು ನೀಡುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇದನ್ನು ಅವರು ಅತ್ಯಂತ ದುರಂತ ಘಟನೆ ಎಂದು ಕರೆದರು.
ಮೃತ ಹಾಗೂ ಗಾಯಗೊಂಡವರಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ ಪ್ರಧಾನಿ ನರೇಂದ್ರ ಮೋದಿ ಹೈದರಾಬಾದ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.
ಇನ್ನು ಸಚಿವ ರಾಮಲಿಂಗಾರೆಡ್ಡಿ ಆಂಧ್ರದಲ್ಲಿ ವೋಲ್ವೊ ಬಸ್ನಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಬಾಗೇಪಲ್ಲಿಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳಿಗೆ ಹೇಳಿದ್ದೇನೆ. ಅಪಘಾತದಲ್ಲಿ ನಮ್ಮವರು ಇದ್ದಾರಾ ಎಂದು ಪರಿಶೀಲನೆ ಮಾಡಲಾಗುತ್ತಿದೆ. ಛತ್ತೀಸ್ಗಢದಲ್ಲಿ ಈ ಬಸ್ನ ನೋಂದಣಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.


