ರಾಜ್ಯಸುದ್ದಿ

ಧರ್ಮಸ್ಥಳ ಬುರುಡೆ ಪ್ರಕರಣ: ಷಡ್ಯಂತ್ರದ ವಿಚಾರಣೆಗೆ SIT ತಿಮರೋಡಿ ಸೇರಿ ನಾಲ್ವರಿಗೆ ನೋಟಿಸ್

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಎಸ್​ಐಟಿ ಮಹೇಶ್​ ಶೆಟ್ಟಿ ತಿಮರೋಡಿ, ಗಿರೀಶ್​ ಮಟ್ಟಣ್ಣನವರ್​​ ಸೇರಿದಂತೆ ನಾಲ್ವರಿಗೆ ನೋಟಿಸ್​ ನೀಡಿದೆ.. ಪ್ರಕರಣದ ವಿಚಾರಣೆಗಾಗಿ ಎಸ್​ಐಟಿ ತನಿಖಾಧಿಕಾರಿ ಜಿತೇಂದ್ರ ದಯಾಮಾ ನೋಟಿಸ್​ ನೀಡಿದ್ಧಾರೆ..

ಸೋಮವಾರ ಬೆಳಿಗ್ಗೆ 10.30ಕ್ಕೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಹಾಗೂ ವಿಠಲ ಗೌಡರಿಗೆ ನೋಟಿಸ್ ನೀಡಲಾಗಿದೆ. ತನಿಖೆಗೆ ಹಾಜರಾಗದಿದ್ದರೆ ಬಂಧನ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಬಿಎನ್ ಎಸ್ಎಸ್ 35(3) ಅಡಿಯಲ್ಲಿ ನೀಡಲಾದ ನೋಟಿಸ್‌ನಲ್ಲಿ, ಪ್ರಕರಣದ ಸಂದರ್ಭಗಳು ಮತ್ತು ಸಂಬಂಧಿತ ಸಂಗತಿಗಳನ್ನು ಖಚಿತಪಡಿಸಲು ಈ ನಾಲ್ವರ ಹಾಜರಾತಿ ಅಗತ್ಯವಿದ್ದುದಾಗಿ ವಿವರಿಸಲಾಗಿದೆ. ತನಿಖಾಧಿಕಾರಿಯು ನೋಟಿಸ್‌ನಲ್ಲಿ ಪ್ರಕರಣದ ಮಹತ್ವಪೂರ್ಣ ಅಂಶಗಳನ್ನು ಉಲ್ಲೇಖಿಸಿ, ಮಾಹಿತಿಯನ್ನು ದೃಢಪಡಿಸಲು ಅವರ ಸಹಕಾರವನ್ನು ಕೇಳಿದ್ದಾರೆ.

Comments (0)

Your email address will not be published. Required fields are marked *

Back to top button