ಚೆನ್ನೈ: ಟಿವಿಕೆ ಪಕ್ಷದ ನಾಯಕ ದಳಪತಿ ವಿಜಯ್ ಕರೂರ್ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬದವರನ್ನು ಚೆನ್ನೈ ಬಳಿಯ ಮಹಾಬಲಿಪುರಂನಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ..
ವಿಜಯ್ ಅವರು ದುಃಖಿತ ಕುಟುಂಬಗಳ ಸದಸ್ಯರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.
ಪ್ರತಿ ಕುಟುಂಬದಿಂದ ನಾಲ್ಕರಿಂದ ಐವರು ವಿಜಯ್ ಅವರನ್ನು ಭೇಟಿ ಮಾಡಲು ಅವಕಾಶ ನೀಡಲಾಗಿತ್ತು. ನಟ ಪ್ರತಿಯೊಬ್ಬರಿಗೂ ಪ್ರತ್ಯೇಕವಾಗಿ ಸಾಂತ್ವನ ಹೇಳಿದ್ದಾರೆ. ಅವರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ವಿಜಯ್ ಅವರು, ಸಂತ್ರಸ್ತ ಕುಟುಂಬಗಳಿಗೆ ಶಿಕ್ಷಣದ ಜೊತೆಗೆ ಆರ್ಥಿಕ ಸಹಾಯದ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಿರ್ಬಂಧಗಳೊಂದಿಗೆ ಮುಚ್ಚಿದ ಬಾಗಿಲಿನ ಸಭೆಯಾಗಿದ್ದು ಕೆಲವೇ ಟಿವಿಕೆ ಕಾರ್ಯಕರ್ತರಿಗೆ ಮಾತ್ರ ಆವರಣದೊಳಗೆ ಅವಕಾಶ ನೀಡಲಾಗಿತ್ತು. ಸೆಪ್ಟೆಂಬರ್ 27 ರಂದು ಕರೂರ್ ನಲ್ಲಿ ವಿಜಯ್ ಅವರ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ ಎರಡು ವರ್ಷದ ಮಗು ಸೇರಿ 41 ಮಂದಿ ಸಾ*ವನ್ನಪ್ಪಿದ್ದರು ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ದುರಂತ ಸಂಭವಿಸಿ ಒಂದು ತಿಂಗಳ ನಂತರ ಟಿವಿಕೆ ಪಕ್ಷದ ಸಂಸ್ಥಾಪಕ, ವಿಜಯ್ ಅವರು ಸಂತ್ರಸ್ತ ಕುಟುಂಬಗಳ ಸದಸ್ಯರನ್ನು ಭೇಟಿಯಾಗಿ ದುರಂತದ ಬಗ್ಗೆ ಮಾತುಕತೆ ನಡೆಸಿದ್ದಾರೆ..


