ರಾಜ್ಯಸುದ್ದಿ

ಹಾಸಿಗೆ ದಿಂಬು ಕೇಳಿದ್ದ ದರ್ಶನ್‌ಗೆ ಡಬಲ್ ಶಾಕ್: ಅ.31 ರಂದು ದೋಷಾರೋಪ ಹೊರಿಸಲು ಕೋರ್ಟ್ ತೀರ್ಮಾನ

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್​​ ಜೈಲಿನಲ್ಲಿ ಹಾಸಿಗೆ, ತಲೆ ದಿಂಬು ಶೀಟ್​ ನೀಡಬೇಕು.ಜೈಲಿನಲ್ಲಿ ವಾಕಿಂಗ್ ಮಾಡಲು ಅವಕಾಶ ನೀಡಬೇಕು ಎನ್ನುವುದು ಸೇರಿದಂತೆ ಇತರೆ ಮೂಲಸೌಕರ್ಯ ನೀಡಿಕೆ ಕೋರಿ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಬೆಂಗಳೂರಿನ 57 ಸಿಸಿಎಚ್ ಕೋರ್ಟ್ ಆದೇಶ ನೀಡಿದೆ. ಆದರೇ, ನಟ ದರ್ಶನ್ ಬೇಡಿಕೆಗಳಿಗೆ ಕೋರ್ಟ್ ಮನ್ನಣೆ ನೀಡಿಲ್ಲ.

ತಿಂಗಳಿಗೊಮ್ಮೆ ಚಾದರ್ , ಬಟ್ಟೆ ಒದಗಿಸಲು ಕೋರ್ಟ್ ಸೂಚನೆ ನೀಡಿದೆ. ಬೇರೆ ಬ್ಯಾರಕ್ ಗೆ ಶಿಫ್ಟ್ ಮಾಡುವ ಆಯ್ಕೆ ಜೈಲು ಅಧಿಕಾರಿಗಳಿಗೆ ನೀಡಿದೆ. ಸಾಧ್ಯವಾದರೆ ಬೇರೆ ಬ್ಯಾರಕ್ ಗೆ ಶಿಫ್ಟ್ ಮಾಡಲು ಸೂಚನೆ ನೀಡಿದೆ. ಪರಪ್ಪನ ಅಗ್ರಹಾರದಲ್ಲಿರುವ ಕ್ವಾರಂಟೈನ್ ಸೆಲ್‌ನಿಂದ ಮುಖ್ಯ ಸೆಲ್‌ಗೆ ವರ್ಗಾವಣೆ ಕೋರಿದ ವಿಚಾರಕ್ಕೆ ಸಂಬಂಧಿಸಿದಂತೆ ಜೈಲಾಧಿಕಾರಿಗಳಿಗೆ ಕೋರ್ಟ್‌ ಅವಕಾಶ ನೀಡಿದೆ.

ರೇಣುಕಾಸ್ವಾಮಿ ಪ್ರಕರಣದ ಶೀಘ್ರ ವಿಚಾರಣೆ ಕೋರಿದ ಎಸ್‌ಪಿಪಿ ಅರ್ಜಿಯನ್ನು ಕೋರ್ಟ್‌ ಮಾನ್ಯ ಮಾಡಿದೆ. ಅ.31 ರಂದು ದೋಷಾರೋಪ ನಿಗದಿಗೆ ಕೋರ್ಟ್ ಸೂಚನೆ ನೀಡುವ ಮೂಲಕ ದರ್ಶನ್‌ಗೆ ಡಬಲ್‌ ಶಾಕ್‌ ಕೊಟ್ಟಿದೆ. ದರ್ಶನ್ ಮತ್ತು ಪವಿತ್ರ ಗೌಡ ಸೇರಿದಂತೆ 6 ಜನ ಆರೋಪಿಗಳು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಹಾಜರಾಗಿದ್ದರೆ ಉಳಿದ ಆರೋಪಿಗಳು ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಾಗಿದ್ದರು.

ನನ್ನನ್ನು ಕ್ವಾರಂಟೈನ್‌ ಸೆಲ್‌ನಲ್ಲೇ ಇರಿಸಲಾಗಿದೆ. ಬಿಸಿಲು ಬೀಳದ ಜಾಗದಲ್ಲಿ ವಾಕಿಂಗ್‌ಗೆ ಅವಕಾಶ ನೀಡಲಾಗಿದೆ. ಇದರಿಂದ ನನ್ನ ಆರೋಗ್ಯದಲ್ಲಿ ಮತ್ತಷ್ಟು ವ್ಯತ್ಯಾಸವಾಗಿದೆ. ಈ ಹಿಂದೆ ನ್ಯಾಯಾಲಯವು ನೀಡಿದ್ದ ಆದೇಶಕ್ಕೂ ಜೈಲಿನ ಅಧಿಕಾರಿಗಳು ಬೆಲೆ ನೀಡುತ್ತಿಲ್ಲ

ಜೈಲಿನಲ್ಲಿ ಕನಿಷ್ಠ ಮೂಲ ಸೌಲಭ್ಯಗಳನ್ನೂ ನೀಡುತ್ತಿಲ್ಲ. ಬ್ಯಾರಕ್‌ನಿಂದ ಹೊರಗೆ ಬರುವುದಕ್ಕೂ ಬಿಡುತ್ತಿಲ್ಲ. ಮೈಮೇಲೆ ಬಿಸಿಲು ಬಿದ್ದು ಹಲವು ದಿನಗಳೇ ಆಗಿವೆ. ಕೈಯಲ್ಲಿ ಫಂಗಸ್‌ ಕಾಣಿಸಿಕೊಂಡಿದೆ. ನಾನು ಬೆನ್ನು ನೋವಿನಿಂದ ಬಳಲುತ್ತಿದ್ದೇನೆ. ಹೀಗಾಗಿ ತಲೆ ದಿಂಬು, ಬೆಡ್ ಶೀಟ್, ಹಾಸಿಗೆ ನೀಡುವಂತೆ ದರ್ಶನ್‌ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದರು.

Comments (0)

Your email address will not be published. Required fields are marked *

Back to top button