Sunday, December 7, 2025
23.6 C
Bengaluru
Google search engine
LIVE
ಮನೆರಾಜಕೀಯಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ಬೆಂಗಳೂರು: ರಾಜ್ಯದಲ್ಲಿ ಇಂದು 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಗ್ತಿದೆ.. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಮತ್ತೊಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕನ್ನಡದಲ್ಲೇ ಶುಭಾಶಯ ಕೋರಿದ್ದು, ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಚಿವ ಅಮಿತ್ ಶಾ, ‘ಕರ್ನಾಟಕದ ಸಹೋದರ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕರ್ನಾಟಕವು ಕಲೆ, ನಾವೀನ್ಯತೆ ಮತ್ತು ಕಲಿಕೆಯ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಇಲ್ಲಿನ ಜನರು ನಮ್ಮ ಸಂಸ್ಕೃತಿ ಮತ್ತು ರಾಷ್ಟ್ರದ ಪ್ರಗತಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ. ರಾಜ್ಯವು ಸದಾ ಸಮೃದ್ಧಿ ಮತ್ತು ವೈಭವದೊಂದಿಗೆ ಅಭಿವೃದ್ಧಿ ಪಥದತ್ತ ಸಾಗಲಿ’ ಎಂದು ಪೋಸ್ಟ್ ಮಾಡಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments