ರಾಜ್ಯಸುದ್ದಿ

ಪುತ್ತೂರಿನಲ್ಲಿ ಕಾರು, ಆಟೋ ನಡುವೆ ಅಪಘಾತ: 4 ವರ್ಷದ ಮಗು ಸಾವು

ಮಂಗಳೂರು: ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ, ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಪುತ್ತೂರು ತಾಲೂಕಿನ ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್​ ಹಾಲ್​ ಬಳಿ ಸಂಭವಿಸಿದೆ..

ಪುತ್ತೂರುನಿಂದ ಕುಟುಂಬ ಸಮೇತ ತಿಂಗಳಾಡಿ ಕಡೆಗೆ ಆಟೋ ಚಾಲಕ ತೆರಳುತ್ತಿದ್ದು, ಸುಳ್ಯ ದಿಕ್ಕಿನಿಂದ ಪುತ್ತೂರಿನತ್ತ ಕಾರು ಬರುತ್ತಿತ್ತು. ಈ ವೇಳೆ ಕಾರು ಮತ್ತು ಆಟೋ ಮುಖಾಮುಖಿ ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ ಅನ್ನು ಓವರ್‌ಟೇಕ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಆಟೋಗೆ ಕಾರು ಚಾಲಕ ಡಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ಆಟೋ ಚಾಲಕ ಹನೀಫ್ ಬನ್ನೂರು ಅವರ ನಾಲ್ಕೂವರೆ ವರ್ಷದ ಮಗಳು ಶಜ್ವಾ ಫಾತಿಮಾ ದುರ್ಮರಣಕ್ಕೀಡಾಗಿದೆ.

ಹನೀಫ್, ಪತ್ನಿ, ಇಬ್ಬರು ಮಕ್ಕಳು ಮತ್ತು ಅತ್ತೆಗೆ ಗಾಯವಾಗಿದ್ದು, ಈ ಪೈಕಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ಘಟನೆ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments (0)

Your email address will not be published. Required fields are marked *

Back to top button