ರಾಜ್ಯಸುದ್ದಿ

ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ: ಪಿಯು ವಿದ್ಯಾರ್ಥಿಗಳಿಗೂ ಬಿಸಿಯೂಟ ವಿಸ್ತರಣೆ ಸಾಧ್ಯತೆ

ಬೆಂಗಳೂರು: ಕರ್ನಾಟಕ ಸರ್ಕಾರ ರಾಜ್ಯದ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿ ಮಧ್ಯಾಹ್ನದ ಬಿಸಿಯೂಟ ನೀಡಲು ತೀರ್ಮಾನಿಸಿದೆ.. ಪ್ರಾಥಮಿಕ ಹಾಗೂ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಬಿಸಿಯೂಟ ಯೋಜನೆಯನ್ನು ಇದೀಗ ಪಿಯುಸಿ ವಿದ್ಯಾರ್ಥಿಗಳಿಗೂ ನೀಡಲು ನಿರ್ಧರಿಸಿದೆ.. ನವೆಂಬರ್ 14 ಮಕ್ಕಳ ದಿನಾಚರಣೆದಂದು ಸರ್ಕಾರದಿಂದ ಅಧಿಕೃತ ಘೋಷಣೆಯಾಗುವ ಸಾಧ್ಯತೆಗಳಿವೆ.

ಸಿಎಂ ಸಿದ್ದರಾಮಯ್ಯ ಅವರಿಂದ ಮಹತ್ವದ ಯೋಜನೆ ಜಾರಿಗೆ ಬರುವ ಸಾಧ್ಯತೆ ಇದೆ. ಸದ್ಯ 1ರಿಂದ 10ನೇ ತರಗತಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದ್ದು, ಈಗ ಹೊಸದಾಗಿ ಪಿಯೂ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಊಟ ನೀಡಲು ಸಿದ್ದರಾಮಯ್ಯ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಸುಮಾರು ಮೂರು ಲಕ್ಷಕ್ಕೂ ಅಧಿಕ ಸರ್ಕಾರಿ ಪಿಯು ವಿದ್ಯಾರ್ಥಿಗಳಿದ್ದಾರೆ. ಗ್ರಾಮೀಣ ಭಾಗದಲ್ಲೇ ಅತಿ ಹೆಚ್ಚು ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಪಿಯು ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ಬಂದ್ರೆ ಬಹಳಷ್ಟು ಸಹಾಯಕ ಆಗಲಿದೆ.

ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ವಿಸ್ತರಣೆಗೆ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆ ಈಗಾಗಲೇ ಇಲಾಖೆಯಿಂದ ಸರ್ಕಾರಿ ಪದವಿ ಪೂರ್ವ ವಿದ್ಯಾರ್ಥಿಗಳ ಸಂಖ್ಯೆ ಮಾಹಿತ ಪಡೆದುಕೊಂಡಿದೆ.

Comments (0)

Your email address will not be published. Required fields are marked *

Back to top button