ರಾಜಕೀಯರಾಜ್ಯಸುದ್ದಿ

ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಪ್ರತಿಭಟನೆ

ಬೆಳಗಾವಿ: ಪ್ರತಿ ಟನ್ಕಬ್ಬಿಗೆ 3,500 ರೂಪಾಯಿ ಬೆಂಬಲ ಬೆಲೆಗೆ ಒತ್ತಾಯಿಸಿ ರೈತರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.. ಇದರಿಂದ ರೊಚ್ಚಿಗೆದ್ದ ರೈತರು ಲಾಠಿ ಚಾರ್ಜ್​ಗೆ ಪ್ರತಿಯಾಗಿ ಪೊಲೀಸರ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಹತ್ತರಗಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ಇಂದು 9ನೇ ದಿನಕ್ಕೆ ಕಾಲಿಟ್ಟಿದೆ. ಕಬ್ಬು ಬೆಳೆಗಾರರು ಬೆಳಗಾವಿಯ ವಿವಿಧ ತಾಲ್ಲೂಕುಗಳಲ್ಲಿ ಸರ್ಕಾರ ವಿರುದ್ಧ ನಡೆಯುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸೋದು ಕಷ್ಟ ಕಷ್ಟವಾಗಿದೆ. ಹೀಗಾಗಿ ಪ್ರತಿಭಟನಾಕಾರರ ಮೇಲೆ ಲಘು ಲಾಠಿ ಪ್ರಹಾರ ನಡೆಲಾಗಿದೆ ಎಂದು ತಿಳಿದು ಬಂದಿದೆ.

 ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್​ನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರೈತರ ಹೋರಾಟ 9ನೇ ದಿನಕ್ಕೆ ಕಾಲಿಟ್ಟಿದೆ. ಇತ್ತ ಹುಕ್ಕೇರಿ ತಾಲೂಕಿನ ಸಾವಿರಾರು ರೈತರು ಟ್ರ್ಯಾಕ್ಟರ್​ಗಳ ಸಮೇತ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ್ದು. ಈ ವೇಳೆ ರಾಜ್ಯ ಸರ್ಕಾರ ಮತ್ತು ಕಾರ್ಖಾನೆ ಮಾಲೀಕರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಜಾರ್ಜ್​​ ನಡೆಸಿದ್ದಾರೆ. ಇದರಿಂದ ರೊಚ್ಚಿಗೆದ್ದ ರೈತರು ಪೊಲೀಸರ ವಿರುದ್ಧ ಸಿಡಿದೆದ್ದಿದ್ದು, ಕಲ್ಲು ತೂರಾಟ ನಡೆಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯನವರು ಕಬ್ಬು ಕಾರ್ಖಾನೆ ಮಾಲೀಕರ ನಡೆ ನಡೆಸಿದ್ದರೆ ಇತ್ತ ಪ್ರತಿ ಟನ್ ಕಬ್ಬಿಗೆ 3500 ರೂ. ದರ ನಿಗದಿ ಪಡಿಸುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಇಂದು ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿ ಹೋಗಿದ್ದು, ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾಗಿದ್ದಾರೆ. ಆ ವೇಳೆ ಪೊಲೀಸರು ಲಾಠಿ ಚಾರ್ಜ್​ ಮೂಲಕ ರೈತರನ್ನು ಚದುರಿಸಲು ಮುಂದಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ರೈತರು ಪೊಲಿಸ್ ವಾಹನಗಳ ಮೇಲೆ ಕಲ್ಲು ತೂರಿದ್ದಾರೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನಿ ಪರಿಸ್ಥಿತಿ ನಿರ್ಮಾಣವಾಗಿದ್ದು, ಕ್ಷಣ ಕ್ಷಣಕ್ಕೂ ರೈತರ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

Comments (0)

Your email address will not be published. Required fields are marked *

Back to top button