ಚಿಕ್ಕಮಗಳೂರು: ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶೃಗೇರಿ ತಾಲೂಕಿನ ಕಾವಡಿ ಸಮೀಪದಲ್ಲಿ ನಡೆದಿದೆ..
ಬಸ್ ಪಲ್ಟಿಯಾದ ಪರಿಣಾಮ ಬಸ್ ನಲ್ಲಿದ್ದ ಮೂವರು ಶಿಕ್ಷಕರು ಹಾಗೂ 22 ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.. ಗಾಯಗೊಂಡ ವಿದ್ಯಾರ್ಥಿಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.. ಐವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದರಿಂದ ತಕ್ಷಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ವಾಸವಿ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಶೃಂಗೇರಿಗೆ ಆಗಮಿಸುತ್ತಿದ್ದರು. ಈ ವೇಳೆ ಶೃಂಗೇರಿಯ ಕಾವಡಿ ಕ್ರಷರ್ ಬಳಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ಪಲ್ಟಿಯಾಗಿದೆ. ಘಟನೆಯಲ್ಲಿ ಗಾಯಗೊಂಡ 11 ವಿದ್ಯಾರ್ಥಿಗಳಿಗೆ ಶೃಂಗೇರಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐದು ವಿದ್ಯಾರ್ಥಿಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದರಿಂದ ತಕ್ಷಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಘಟನೆಯ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


