ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜ್ಯಾತಿಥ್ಯ ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ..
ಜೈಲಿನಲ್ಲಿ ರಾಜಾತಿಥ್ಯ ಖಂಡಿಸಿ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.. ಸರ್ಕಾರದ ವಿರುದ್ಧ ಪ್ಲೆಕಾರ್ಡ್ಗಳನ್ನು ಹಿಡಿದುಕೊಂಡು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದ್ದಾರೆ. ಈ ವೇಳೆ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ..
ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಆರ್. ಅಶೋಕ್, ಸಿಟಿ ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.


