ಮೈಸೂರು: ಚುನಾವಣೆಯ ಸಂದರ್ಭದಲ್ಲಿ ಸಂಭವಿಸುತ್ತಿರುವ ಬಾಂಬ್ ಬ್ಯಾಸ್ಟ್ ಬಗ್ಗೆ ಕೇಂದ್ರ ಸರ್ಕಾರವೇ ಉತ್ತರಿಸಬೇಕು. ಕಾರು ಸ್ಪೋಟದ ಬಗ್ಗೆ ತನಿಖೆ ನಡೆಸಿ ಉತ್ತರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..
ಮೈಸೂರಿನಲ್ಲಿ ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಬಾಂಬ್ ಬ್ಲಾಸ್ಟ್ ಪ್ರಕರಣದ ಮಾತನಾಡಿದ ಅವರು, ನಿನ್ನೆ ನಡೆದ ಭೀಕರ ಕಾರು ಸ್ಫೋಟದ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಿ ಉತ್ತರಿಸಲಿ. ಅಮಾಯಕರ ಜೀವಕ್ಕೆ ಹಾನಿಯಾಗಿರುವುದು ಬೇಸರದ ಸಂಗತಿ. ಬಾಂಬ್ ದಾಳಿಯಲ್ಲಿ ಮೃತಪಟ್ಟವರ ಕುಟುಂಬದ ಜೊತೆ ನಾವು ಇರುತ್ತೇವೆಎಂದು ಹೇಳಿದರು.
ಬಾಂಬ್ ಬ್ಲಾಸ್ಟ್ ಘಟನೆಯಿಂದ ಬಿಹಾರದ ಚುನಾವಣೆ ಮೇಲೆ ಪರಿಣಾಮ ಬೀರಲಿದೆ. ಇಂದು ಬಿಹಾರದಲ್ಲಿ ಅಂತಿಮ ಹಂತದ ಮತದಾನ ನಡೆಯುತ್ತಿದ್ದು, ಇದು ಬಿಜೆಪಿ ಪಕ್ಷದ ಮೇಲೆಯೇ ಪರಿಣಾಮ ಬೀರಲಿದೆ ಎಂದು ಹೇಳಿದರು. ಇನ್ನು ವಿಧಾನಸೌಧದಲ್ಲಿ ಭಯೋತ್ಪಾದಕರಿದ್ದಾರೆ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಭಯೋತ್ಪಾದಕರು ಯಾರು ಎಂದು ಅವರೇ ಹೇಳಬೇಕು, ಅದು ಬಿಟ್ಟು ಹಿಟ್ ಅಂಡ್ ರನ್ ರೀತಿಯಲ್ಲಿ ಮಾತನಾಡಬಾರದು ಎಂದು ಹೇಳಿದರು.


