Thursday, November 20, 2025
19.9 C
Bengaluru
Google search engine
LIVE
ಮನೆರಾಜ್ಯಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಕಲಬುರಗಿ ಹೈಕೋರ್ಟ್ ಅನುಮತಿ

ಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಕಲಬುರಗಿ ಹೈಕೋರ್ಟ್ ಅನುಮತಿ

ಕಲಬುರಗಿ: ಚಿತ್ತಾಪುರದಲ್ಲಿ ಆರ್ಎಸ್​​ ಎಸ್​​ ಪಥಸಂಚಲನಕ್ಕೆ ಕಲಬುರಗಿ ಹೈಕೋರ್ಟ್​​ ಪೀಠ ಷರತ್ತುಬದ್ದ ಅನುಮತಿ ನೀಡಿದೆ. ಬಗ್ಗೆ ಹೈಕೋರ್ಟ್​​​ ಜಿಲ್ಲಾಡಳಿತ ಮಾಹಿತಿ ನೀಡಿದ್ದು, .16 ಮಧ್ಯಾಹ್ನ 3.30ರಿಂದ ಸೂರ್ಯಾಸ್ತದವರೆಗೆ ಪಥ ಸಂಚಲನಕ್ಕೆ ಅವಕಾಶ ನೀಡಲಾಗಿದೆ.. . ಪಥಸಂಚಲನದಲ್ಲಿ 300 ಕಾರ್ಯಕರ್ತರು ಹಾಗೂ 25 ಬ್ಯಾಂಡ್ ವಾದಕರಿಗೆ ಅವಕಾಶ ನೀಡಲಾಗಿದ್ದು, ಒಟ್ಟು 325 ಜನ ಮಾತ್ರ ಭಾಗಿಯಾಗಬೇಕು ಎಂದು ತಿಳಿಸಿದೆ.

ನವೆಂಬರ್​ 7ರಂದು ಇದೇ ವಿಚಾರವಾಗಿ ಕಲಬುರಗಿ ವಿಭಾಗೀಯ ಪೀಠದಲ್ಲಿ ನಡೆದಿದ್ದ ವಿಚಾರಣೆ ವೇಳೆ, ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದು, ಜಿಲ್ಲಾಡಳಿತಕ್ಕೆ ನಾವು ನಮ್ಮ ಪ್ರಸ್ತಾವನೆ ನೀಡಿದ್ದೇವೆ. ಸರ್ಕಾರದ ನಿರ್ಧಾರವನ್ನು ಅಡ್ವೊಕೆಟ್ ಜನರಲ್ ತಿಳಿಸಬೇಕು ಎಂದು ಹೇಳಿದ್ದರು. ಜಿಲ್ಲಾಡಳಿತ ಪರವಾಗಿ ವಾದ ಮಾಡಿದ್ದ ಅಡ್ವೊಕೆಟ್ ಜನರಲ್ ಶಶಿಕರಣ್​ ಶೆಟ್ಟಿ, ಪಥಸಂಚನಲಕ್ಕಾಗಿ 11 ಅರ್ಜಿಗಳು ಸಲ್ಲಿಕೆಯಾಗಿವೆ.

ಅವುಗಳನ್ನು ಪರಿಶೀಲಿಸಲಾಗಿದ್ದು, ಪ್ರತಿಯೊಬ್ಬರಿಗೂ ಪ್ರತ್ಯೇಕ ದಿನ ಅವಕಾಶ ನೀಡಲು ಚಿಂತಿಸಲಾಗಿದೆ. ಇದಕ್ಕಾಗಿಒಂದು ವಾರ ಕಾಲಾವಕಾಶ ನೀಡುವಂತೆ ನ್ಯಾಯಾಲಕ್ಕೆ ಮನವಿ ಮಾಡಿದ್ದರು. ನ. 13 ಅಥವಾ 16ರಂದು ಕಾರ್ಯಕ್ರಮಕ್ಕೆ ಕಲ್ಯಾಣ ಮಂಟಪ ಲಭ್ಯವಿದೆ . ಹೀಗಾಗಿ ಅದೇ ದಿನಾಂಕದಲ್ಲಿ ಅನುಮತಿ ನೀಡಿ ಎಂದು ಈ ವೇಳೆ ಅರ್ಜಿದಾರು ಮನವಿ ಮಾಡಿದ್ದು, ಈ ಬಗ್ಗೆ ನಿರ್ಧರಿಸಲಾಗುವುದು ಎಂದು ಎಜಿ ನ್ಯಾಯಾಲಯಕ್ಕೆ ತಿಳಿಸಿದ್ದರು. ಈಗ ಅರ್ಜಿದಾರರ ಮನವಿಯಂತೆ ನ.16ರಂದು ಪಥಸಂಸಲನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments