ಬೆಂಗಳೂರು: ಬಿಹಾರ ಚುನಾವಣಾ ಫಲಿತಾಂಶದಲ್ಲಿ ಮತಗಳ್ಳತ ನಡೆದಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪ ವಿಚಾರಕ್ಕೆ ಕೆಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ..
ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ ಪ್ರಶ್ನೆ ಇಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 135 ಸ್ಥಾನಗಳನ್ನು ಹೇಗೆ ಗೆದ್ದಿತು ಎಂದು ಕರಂದ್ಲಾಜೆ ಪ್ರಶ್ನಿಸಿದ್ದಾರೆ.. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಗೆದ್ದಾಗ ಮತಗಳ್ಳತನ. ತೆಲಂಗಾಣ ಗೆದ್ದಾಗ ಮತಗಳ್ಳತನ ಇಲ್ಲ. ರಾಹುಲ್ ಗಾಂಧಿಯವರದ್ದು ಹಿಟ್ & ರನ್ ಟೀಂ ಎಂದು ಕೇಂದ್ರ ಸಚಿವೆ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯನವರೇ ನೀವು 135 ಸೀಟು ಹೇಗೆ ಗೆದ್ದೀದ್ದೀರಿ. ರಾಜಕಾರಣವನ್ನು ರಾಜಕಾರಣವಾಗಿ ಎದುರಿಸಿ. ಓಡಿ ಹೋಗಬೇಡಿ. ರಾಹುಲ್ ಗಾಂಧಿ ಮತ್ತು ನಿಮ್ಮ ಪಕ್ಷದ್ದು ಹಿಟ್ ಆಂಡ್ ರನ್ ಕೇಸ್. ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ ಪ್ರಶ್ನೆ ಇಲ್ಲ. ತೆಲಂಗಾಣ ಗೆದ್ದಾಗ ಮತಗಳ್ಳತನ ಇಲ್ಲ. ನಾವು ಗೆದ್ದಾಗ ಮತಗಳ್ಳತನ. ಇದು ರಾಜಕಾರಣನಾ ಎಂದು ಪ್ರಶ್ನಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಬಿಹಾರದ ಜನತೆ ಕಾಂಗ್ರೆಸ್ಸನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಪಾಕಿಸ್ತಾನದಿಂದ, ಬಾಂಗ್ಲಾದಿಂದ ಬಂದವರು, ಸತ್ತು ಹೋದವರು, ಎರಡು ಹೆಸರು ಇದ್ದ ಮತಗಳನ್ನು ರದ್ದು ಮಾಡಿದ್ದಾರೆ. ಇದರಲ್ಲಿ ತಪ್ಪೇನು? ಸಮಸ್ಯೆ ಇದ್ದಲ್ಲಿ ಅವತ್ತೇ ನಿಮ್ಮ ಏಜೆಂಟ್ ಅದನ್ನು ಪ್ರಶ್ನಿಸಬೇಕಿತ್ತಲ್ಲವೇ, ಈಗ ಎಸ್‌ಐಆರ್ ಸರಿ ಇಲ್ವ ಮತಗಳ್ಳತನ ನಡೆದಿದೆ, ಇವಿಎಂ ಸರಿ ಇಲ್ಲ ಎಂದು ಹೇಳಿದರೆ ಹೇಗೆ? ಸೋತ ಮೇಲೆ ಈ ಹೇಳಿಕೆ ಕೊಟ್ಟರೆ ನಿಮ್ಮನ್ನು ಯಾರೂ ನಂಬುವುದಿಲ್ಲ ಎಂದು ಹೇಳಿದ್ದಾರೆ.


