ಜಿಲ್ಲೆರಾಜ್ಯಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರದ್ದು ಮಾಡಿದ ಹೈಕೋರ್ಟ್

ಬೆಂಗಳೂರು: ಸಾಮಾಜಿಕ ಹೋರಾಟಗಾರ ಮಹೇಶ್​ ಶೆಟ್ಟಿ ತಿಮರೋಡಿಗೆ ಬಿಗ್​​ ರಿಲೀಫ್​​​ ಸಿಕ್ಕಿದ್ದು, ಗಡಿಪಾರು ಆದೇಶವನ್ನು ಹೈಕೋರ್ಟ್​ ರದ್ದುಗೊಳಿಸಿದೆ.. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಗಡಿಪಾರು ಆದೇಶವನ್ನು ಪ್ರಶ್ನಿಸಿ ಮಹೇಶ್​ ಶೆಟ್ಟಿ ತಿಮರೋಡಿ ಅರ್ಜಿ ವಿಚಾರಣೆ ನ್ಯಾ. ಸೂರಜ್​​​​ ಗೋವಿಂದರಾಜು ಪೀಠದಲ್ಲಿ ನಡೆಯಿತು.

ವಿಚಾರಣೆ ವೇಳೆ ಗಡಿಪಾರು ಅಗತ್ಯ ಇದ್ದರೆ ಮತ್ತೊಮ್ಮೆ ಹೊಸದಾಗಿ ಕಾನೂನಿನ ಪ್ರಕಾರವಾಗಿ 15 ದಿನದ ಒಳಗಡೆ ಆದೇಶ ಮಾಡಲು ಪುತ್ತೂರು ಎಸಿಗೆ ಹೈಕೋರ್ಟ್ ಅವಕಾಶ ನೀಡಿದೆ.

ತಿಮರೋಡಿಯನ್ನು ಒಂದು ವರ್ಷ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆ.20 ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು. ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಸುಮಾರು 32 ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿತ್ತು. ಗಡಿಪಾರು ಆದೇಶವನ್ನು ಮಹೇಶ್ ತಿಮರೋಡಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

Comments (0)

Your email address will not be published. Required fields are marked *

Back to top button