Wednesday, November 19, 2025
24.2 C
Bengaluru
Google search engine
LIVE
ಮನೆರಾಜಕೀಯಸಿಎಂ ಸಿದ್ದರಾಮಯ್ಯ ದೆಹಲಿ ಹೊರಡುವ ಮುನ್ನ, ಹಲವು ನಾಯಕರು ಸಿಎಂ ನಿವಾಸಕ್ಕೆ ವಿಸಿಟ್​

ಸಿಎಂ ಸಿದ್ದರಾಮಯ್ಯ ದೆಹಲಿ ಹೊರಡುವ ಮುನ್ನ, ಹಲವು ನಾಯಕರು ಸಿಎಂ ನಿವಾಸಕ್ಕೆ ವಿಸಿಟ್​

ಬೆಂಗಳೂರು: ರಾಜ್ಯ ಕಾಂಗ್ರೆಸ್​​ನಲ್ಲಿ ಕ್ಯಾಬಿನೆಟ್​​ ಪುನಾರಚನೆ ಚರ್ಚೆ ಜೋರಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಇಂದು ದೆಹಲಿ ಹೊರಡುವ ಮುನ್ನ ಹಲವು ಕಾಂಗ್ರೆಸ್​ ಶಾಸಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ..

ಬಹುತೇಕ ನಾಯಕರು ಮಂತ್ರಿ ಸ್ಥಾನದ ಆಕಾಂಕ್ಷಿಗಳು ಆಗಿದ್ದು, ಮಾಜಿ ಸಚಿವರಾದ ಕೆ.ಎನ್​. ರಾಜಣ್ಣ ಶಾಸಕರಾದ ನರೇಂದ್ರಸ್ವಾಮಿ, ಬಿ. ಆರ್​. ಪಾಟೀಲ್​​​​, ವಿಜಯಾನಂದ ಕಾಶಪ್ಪನವರ್​​, ಅಶೋಕ್​ ಅಶೋಕ್ ಪಟ್ಟಣ, ಪೊನ್ನಣ್ಣ ಸೇರಿದಂತೆ ಹಲವರು ಭೇಟಿ ಮಾಡಿದ್ದಾರೆ.

ಸಿಎಂ ಮತ್ತು ಕೆ.ಎನ್.ರಾಜಣ್ಣ ನಡುವೆ ಸುಮಾರು 20 ನಿಮಿಷ ಪ್ರತ್ಯೇಕ ಮಾತುಕತೆ ನಡೆದಿದೆ. ಸಿದ್ದರಾಮಯ್ಯ ಅವರು ದೆಹಲಿಗೆ ತೆರಳುವ ಮುನ್ನ K.N.ರಾಜಣ್ಣ ಚರ್ಚೆ ನಡೆಸಿರೋದು ಭಾರಿ ಕುತೂಹಲ ಮೂಡಿಸಿದೆ. ಮಂತ್ರಿ ಸ್ಥಾನದ ವಿಚಾರವಾಗಿ ಸಿದ್ದರಾಮಯ್ಯ ಜೊತೆ ರಾಜಣ್ಣ ಚರ್ಚೆ ನಡೆಸಿದ್ದಾರೆ. ಮಂತ್ರಿ ಸ್ಥಾನಕ್ಕಿಂತ ತಮ್ಮ ಕುರಿತು ಉಂಟಾಗಿರುವ ತಪ್ಪು ಅಭಿಪ್ರಾಯವನ್ನು ರಾಹುಲ್​ ಗಾಂಧಿ ಅವರಿಗೆ ಮನವರಿಕೆ ಮಾಡಿ ಎಂದು ಈ ವೇಳೆ ರಾಜಣ್ಣ ತಿಳಿಸಿದ್ದಾರೆ ಎನ್ನಲಾಗಿದೆ.

ಸಿಎಂ, ರಾಜಣ್ಣ ಮಾತುಕತೆ ವೇಳೆ ಆಗಮಿಸಿದ ಸಚಿವ H.C.ಮಹದೇವಪ್ಪ, ಏನು ಇಬ್ಬರೇ ಸಪರೇಟ್ ಸಭೆ ಮಾಡ್ತಾ ಇದ್ದೀರಿ ಎಂದು ಪ್ರಶ್ನಿಸಿದ್ದಾರೆ. ನನ್ನ, ರಾಜಣ್ಣ ನಡುವೆ ಒಳಗೊಂದು ಹೊರಗೊಂದು ಇಲ್ಲ ಎಂದು ಸಿಎಂ ನಗುತ್ತಲೇ ಉತ್ತರ ನೀಡಿದ್ದು, ದೆಹಲಿಗೆ ಹೋಗಿ ಮಾತನಾಡಿ ಬರ್ತೀನಿ ಎಂದಿದ್ದಾರೆ. ಇಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಭೇಟಿ ಮಾಡಲಿದ್ದಾರೆ.

ಸಿಎಂ ಭೇಟಿ ಬಗ್ಗೆ ಪ್ರತಿಕ್ರಿಯಿಸಿರೋ ಶಾಸಕ ವಿಜಯಾನಂದ ಕಾಶಪ್ಪನವರ್, ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ.ಅದಕ್ಕಾಗಿಯೇ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇನೆ ಎಂದಿದ್ದಾರೆ. ಕಾಲ ಬಂದಾಗ ಮಾಡೋಣವೆಂದು ಸಿಎಂ ಹೇಳಿದ್ದು, ಸಲ್ಲಿಸಿದ ಸೇವೆ ಪರಿಗಣಿಸಿ ಎಂದು ಕೇಳಿದ್ದೇನೆ. ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಶಾಸಕ ಕಾಶಪ್ಪನವರ್ ಹೇಳಿದ್ದಾರೆ. ಈ ಬಗ್ಗೆ ಸಿಎಂ, ಡಿಸಿಎಂ, ಕೆಸಿ ವೇಣುಗೋಪಾಲ್​, ಸುರ್ಜೇವಾಲ ಸೇರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಮನವಿ ಮಾಡಿದ್ದೇನೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್​ ನಮ್ಮ ದೇವರಾಗಿದ್ದು, ದೇವರು ಇಲ್ಲೇ ಇರಬೇಕಾದ್ರೆ ಬೇರೆ ಎಲ್ಲಿಗೆ ನಾನು ಹೋಗಲಿ ಎಂದವರು ತಿಳಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments