ಬೆಂಗಳೂರು: ಹಾಡ ಹಗಲೇ 7.11 ಕೋಟಿ ರೂಪಾಯಿಗಳನ್ನು ಖದೀಮರು ದರೋಡೆ ಮಾಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.. ಜಯನಗರದ ಅಶೋಕ್ ಪಿಲ್ಲರ್ ಬಳಿ ಸಿಎಂಎಸ್ ಕಂಪನಿಗೆ ಸೇರಿದ ವಾಹನದಿಂದ ಹಣವನ್ನು ದೋಚಿ ಖದೀಮರು ಎಸ್ಕೇಪ್ ಆಗಿದ್ದಾರೆ..
ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂ ಕಡೆ ಹೊರಟಿದ್ದ ಹಣ ಇದ್ದ ವಾಹನವನ್ನು ಜಯದೇವ ಡೇರಿ ಸರ್ಕಲ್ನ ಬಳಿ ತಡೆದಿದ್ದಾರೆ.. ವಾಹನದಲ್ಲಿದ್ದ ಗನ್ಮ್ಯಾನ್ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿ ವಾಹನ ಸಮೇತ ಚಾಲಕನನ್ನು ಡೇರಿ ಸರ್ಕಲ್ಗೆ ಕರೆದೊಯ್ದಿದ್ದಾರೆ. ಬಳಿಕ ಡೇರಿ ಸರ್ಕಲ್ ಫ್ಲೈಓವರ್ ಮೇಲೆ ನಿಲ್ಲಿಸಿ ವಾಹನದಲ್ಲಿದ್ದ ಹಣವನ್ನು ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಸುದ್ದಗುಂಟೆಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಟಿಎಂ ವಾಹನದಲ್ಲಿ ಒಟ್ಟು ನಾಲ್ಕು ಜನ ಸಿಎಂಎಸ್ ಸಿಬ್ಬಂದಿ ಇದ್ದರು. ಓರ್ವ ಡ್ರೈವರ್,ಇಬ್ಬರು ಗನ್ ಮ್ಯಾನ್ ಹಾಗೂ ಮತ್ತೊಬ್ಬ ಹಣ ಹಾಕುವ ಸಿಬ್ಬಂದಿ ಇದ್ದು, ಸದ್ಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಇವರ ವಿಚಾರಣೆ ನಡೆಯುತ್ತಿದೆ.


