ಜಿಲ್ಲೆದೇಶ/ವಿದೇಶರಾಜ್ಯಸುದ್ದಿ

7.11 ಕೋಟಿ ಹಣ ದರೋಡೆಯ ಅಸಲಿ ಸತ್ಯ ಪೊಲೀಸರ ತನಿಖೆಯಲ್ಲಿ ಬಯಲು

ಬೆಂಗಳೂರು: ನಗರದಲ್ಲಿ ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ 7.11 ಕೋಟಿ ಹಣವನ್ನು ದರೋಡೆಯ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆ ವೇಳೆ ಆರೋಪಿಗಳು ದರೋಡೆ ಗುಟ್ಟು ಬಿಚ್ಚಿಟ್ಟಿದ್ದಾರೆ. ದರೋಡೆಕೋರರನ್ನ ಬೆಂಗಳೂರು ಪೊಲೀಸರು ಬಂಧನ ಮಾಡಿದ್ದಾರೆ.. ಸಿಎಂಎಸ್​ ಸಂಸ್ಥೆ ಮಾಜಿ ಮಾಸ್ಟರ್​​ ಮೈಂಡ್​​​ ಜೇವಿಯರ್​​​​, ಗೋವಿಂದಪುರ ಪೊಲೀಸ್​​​ ಠಾಣಾ ಕಾನ್​​​​​ಸ್ಟೆಬಲ್​​​​​​​​​​​​​​ ಅಣ್ಣಪ್ಪನಾಯ್ಕ್​​​​​, ಹಾಲಿ ಸಿಎಂಎಸ್​​ ಸಂಸ್ಥೆ ಸಿಬ್ಬಂದಿ ಗೋಪಿ, ರವಿ, ಜಿತೇಶ್​​​ ಸೇರಿ ಒಟ್ಟು ಏಳು ದರೋಡೆಕೋರರನ್ನು ಬಂಧಿಸಲಾಗಿದೆ.. ಬಂಧಿತ ದರೋಡೆಕೋರರಿಂದ 6.29 ಕೋಟಿ ಹಣ ರಿಕವರಿ ಮಾಡಲಾಗಿದೆ..

ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ದರೋಡೆ ಗುಟ್ಟು ಬಿಚ್ಚಿಟ್ಟಿದ್ದಾರೆ. ಸಾಲ ತೀರಿಸುವ ಸಲುವಾಗಿ ಆರೋಪಿಗಳು ದರೋಡೆ ಮಾಡಿದ್ದು, ಮಾಸ್ಟರ್ ಮೈಂಡ್ ಕ್ಸೇವಿಯರ್ ಸೇರಿ ಬಹುತೇಕರು ಸಾಲಗಾರರು ಎಂಬುದು ಗೊತ್ತಾಗಿದೆ. ಆರೋಪಿಗಳು ಇಸ್ಪೀಟು, ಜೂಜು ಚಟಕ್ಕೆ ಬಿದ್ದು ಸಾಲ ಮಾಡಿಕೊಂಡಿದ್ದು, ಅದನ್ನು ಹೇಗಾದರೂ ತೀರಸಿಬೇಕೆಂದು ಎಟಿಎಂ ವಾಹನ ದರೋಡೆಗೆ ಸ್ಕೇಚ್ ಹಾಕಿದ್ದರು ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ.

ಮುಖ್ಯ ಆರೋಪಿಗಳಾದ ಗೋಪಿ ಮತ್ತು ಕ್ಸೇವಿಯರ್ 17 ಸಾವಿರ ರೂಪಾಯಿ ಸಂಬಳ ಪಡೆಯುತ್ತಿದ್ದರು. ಆ ಪೈಕಿ ಕ್ಸೇವಿಯರ್ ಒಂದು ವರ್ಷದ ಹಿಂದೆಯೇ ಕೆಲಸ ಬಿಟ್ಟಿದ್ದ. ಕುಡಿತ, ಜೂಜಿನ ಚಟದಿಂದಾಗಿ ಆರೋಪಿಗಳು ಹಣಕಾಸು ಸಮಸ್ಯೆಗೆ ಸಿಲುಕಿದ್ದರು. ದರೋಡೆ ಹಣದಲ್ಲಿ ಸಾಲ ತೀರಿಸಿ, ಉಳಿದ ಹಣದಲ್ಲಿ ಐಷಾರಾಮಿ ಜೀವನ ನಡೆಸುವ ಪ್ಲ್ಯಾನ್​​ ಆರೋಪಿಗಳದ್ದಾಗಿತ್ತು. ಈ ಹಿನ್ನಲೆ ಪೊಲೀಸ್ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಪ್ಲ್ಯಾನ್ ಪ್ರಕಾರ ATM ವಾಹನ ದರೋಡೆ ಮಾಡಲಾಗಿದ್ದು, ಹಾಲಿ ಸಿಬ್ಬಂದಿ ಗೋಪಿಯೇ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್​ ಎಂಬುದು ಬಹಿರಂಗವಾಗಿದೆ. ಪ್ರಕರಣ ಸಂಬಂಧ ಸದ್ಯ ಮೂವರನ್ನು ಬಂಧಿಸಿ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಮತ್ತೆ ಮೂವರನ್ನು ಹೈದರಾಬಾದ್​ನಿಂದ ಕರೆತರಲಾಗಿದೆ.

ಸದಾಶಿವನಗರದಲ್ಲಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್​ ನಿವಾಸಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಅಪರಾಧ ವಿಭಾಗ ಜಂಟಿ ಪೊಲೀಸ್ ಆಯುಕ್ತ ಅಜಯ್ ಹಿಲೋರಿ, ಪಶ್ಚಿಮ ವಿಭಾಗ ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ಮತ್ತು ದಕ್ಷಿಣ ವಿಭಾಗ ಡಿಸಿಪಿ ಲೋಕೇಶ್ ಜಗಲಾಸರ್ ಭೇಟಿ ನೀಡಿದ್ದಾರೆ. ದರೋಡೆ ಪ್ರಕರಣ ಬೇಧಿಸಿರುವ ಬೆಂಗಳೂರು ಪೊಲೀಸರನ್ನ ತಮ್ಮ ನಿವಾಸಕ್ಕೆ ಕರೆಸಿ ನಗರ ಪೊಲೀಸರ ಕಾರ್ಯಕ್ಕೆ ಗೃಹಸಚಿವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ತನಿಖೆಯ ಬಗ್ಗೆ ಮಾಹಿತಿಯನ್ನೂ ಪಡೆದುಕೊಂಡಿದ್ದಾರೆ.

7.11 ಕೋಟಿ ಹಣ ದರೋಡೆ ಸಂಬಂಧ ಈವರೆಗೆ 7 ಆರೋಪಿಗಳನ್ನು ಬಂಧಿಸಲಾಗಿದೆ. ಈಗ 6.29 ಕೋಟಿ ಹಣ ಸಿಕ್ಕಿದೆ, ಉಳಿದ ಹಣದ ಬಗ್ಗೆ ತನಿಖೆ ಆಗ್ತಿದೆ. ಪೊಲೀಸರು ತಾಂತ್ರಿಕವಾಗಿ & ಎಚ್ಚರಿಕೆಯಿಂದ ಕೆಲಸ ಮಾಡಿದ್ದು, ಆರೋಪಿಗಳು ಬಳಸಿದ ವಾಹನಗಳನ್ನು ಸೀಜ್ ಮಾಡಿದ್ದಾರೆ. ಮುಂದೆ ಇಲಾಖೆಯಲ್ಲಿ ಇನ್ನಷ್ಟು ಎಚ್ಚರಿಕೆಯಿಂದ ಇರಬೇಕು ಎಂದು ಗೃಹ ಸಚಿವ ಪರಮೇಶ್ವರ್​ ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button