ಮುಂಬೈ: ಟೀಂ ಇಡಿಯಾದ ಆಟಗಾರ್ತಿ ಸ್ಮೃತಿ ಮಂಧಾನ ಮತ್ತು ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರ ಮದುವೆ ಕಾರ್ಯಕ್ರಮ ಮುಂದೂಡಲಾಗಿದೆ.. ಸ್ಮೃತಿ ಅವರ ತಂದೆ ಶ್ರೀನಿವಾಸ್ ಅವರಿಗೆ ತಂದೆಗೆ ಹೃದಯಾಘಾತ ಸಂಭವಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗಾಗಿ ಮದುವೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಕ್ರಿಕೆಟ್ ಆಟಗಾರ್ತಿಯ ಮ್ಯಾನೇಜರ್ ಅವರು ಮಾಧ್ಯಮಗಳಿಗರ ಮಾಹಿತಿ ನೀಡಿದ್ದಾರೆ..
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸಮದೋಲ್ನಲ್ಲಿರುವ ಮಂಧಾನ ಫಾರ್ಮ್ ಹೌಸ್ನಲ್ಲಿ ವಿವಾಹ ಮಹೋತ್ಸವಕ್ಕಾಗಿ ತಯಾರಿ ನಡೆದಿತ್ತು. ಇವತ್ತೇ ಕಾರ್ಯಕ್ರಮ ಇತ್ತು. ಆದರೆ, ಸ್ಮೃತಿ ಅವರ ತಂದೆ ಶ್ರೀನಿವಾಸ್ ಅವರಿಗೆ ಹೃದಯಾಘಾತಗೊಂಡಿದೆ. ಅವರನ್ನು ಸಾಂಗ್ಲಿಯಲ್ಲಿರುವ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.
ಸ್ಮೃತಿ ಮಂಧಾನಾ ಮತ್ತು ಸಂಗೀತ ಸಂಯೋಜಕ, ಚಲನಚಿತ್ರ ನಿರ್ಮಾಪಕ ಪಲಾಶ್ ಮುಚ್ಚಲ್ ಅವರ ವಿವಾಹ ಕಾರ್ಯಕ್ರಮ ಭರ್ಜರಿಯಾಗಿ ನಡೆದಿತ್ತು. ಇವರ ವಿವಾಹ ಸಂಭ್ರಮದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಇವರಿಬ್ಬರ ವಿವಾಹ ಮಹೋತ್ಸವ ಹಲವು ದಿನಗಳಿಂದಲೂ ನಡೆಯುತ್ತಿದೆ. ಮೆಹಂದಿ, ಹಲ್ದಿ ಇತ್ಯಾದಿ ಶಾಸ್ತ್ರಗಳು ನಡೆದಿವೆ. ಸಂಗೀತ ಕಾರ್ಯಕ್ರಮಗಳೂ ಕೂಡ ದೊಡ್ಡ ಸುದ್ದಿಯಾದವು. ಸ್ಮೃತಿ, ಪಲಾಶ್ ಅವರು ಡ್ಯಾನ್ಸ್ ಮಾಡುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ವಧು ಮತ್ತು ವರರ ತಂಡಗಳ ಮಧ್ಯೆ ಕ್ರಿಕೆಟ್ ಪಂದ್ಯವನ್ನೂ ಆಯೋಜಿಸಲಾಗಿತ್ತು ಆದರೇ ಸ್ಮೃತಿ ತಂದೆ ಅವರಿಗೆ ಅನಾರೋಗ್ಯದ ಕಾರಣದಿಂದ ವಿವಾಹವನ್ನು ಮುಂದೂಡಲಾಗಿದೆ..


