ಜಿಲ್ಲೆರಾಜ್ಯಸುದ್ದಿ

ಹೆಣ್ಣು ಮಗು ಜನಿಸಿದೆ ಎಂದು 3 ದಿನದ ಮಗುವನ್ನು ಕೊಲೆ ಮಾಡಿದ ಪಾಪಿ ತಾಯಿ

ಬೆಳಗಾವಿ: ಹೆಣ್ಣು ಮಗು ಜನಿಸಿದ್ದಕ್ಕೆ ಹೆತ್ತತಾಯಿಯೇ ಕತ್ತು ಹಿಸುಕಿ 3 ದಿನದ ಹಸುಗೂಸನ್ನು ಸಾಯಿಸಿರುವ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ನಡೆದಿದೆ.. ಅಶ್ವಿನಿ ಹಳಕಟ್ಟಿ (28) ಕೊಲೆ ಮಾಡಿದ ಪಾಪಿ ತಾಯಿ.

ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಮೂಲದ ಅಶ್ವಿನಿ ಹಳಕಟ್ಟಿಗೆ ಈಗಾಗಲೇ ಮೂವರು ಹೆಣ್ಣುಮಕ್ಕಳಿದ್ದು, ಗಂಡು ಮಗುವಿನ ನಿರೀಕ್ಷೆಯಲ್ಲಿದ್ದರು. ಆದರೆ ನ.23ರಂದು ಮುದಕವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮತ್ತೆ ಹೆಣ್ಣು ಮಗುವಿಗೆ ಜನ್ಮನೀಡಿದ್ದಾರೆ.

ಜನ್ಮ ನೀಡಿದ ಮಾರನೇ ದಿನ ಅಶ್ವಿನಿ ತವರುಮನೆ ಹಿರೇಮುಲಂಗಿಗೆ ಬಂದಿದ್ದಾರೆ. ಇಂದು ಬೆಳಗ್ಗೆ ತಾಯಿ ಹೊರ ಹೋದಾಗ ಹಸುಗೂಸಿನ ಕತ್ತು ಹಿಸುಕಿ ಅಶ್ವಿನಿ ಹತ್ಯೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮಗು ಉಸಿರಾಡುತ್ತಿಲ್ಲ ಅಂತಾ ಕಥೆ ಕಟ್ಟಿದ್ದಾಳೆ.

ತಕ್ಷಣ ರಾಮದುರ್ಗ ತಾಲೂಕಾಸ್ಪತ್ರೆಗೆ ಮಗು ಕರೆತರಲಾಗಿದ್ದು, ಕತ್ತು ಹಿಸುಕಿ ಉಸಿರುಗಟ್ಟಿಸಿ ಮಗು ಸಾವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಆಗ ಘಟನೆ ಬೆಳಕಿಗೆ ಬಂದಿದೆ. ಸುರೇಬಾನ ಪೊಲೀಸ್ ಠಾಣೆಯಲ್ಲಿ ತಾಯಿ ವಿರುದ್ಧ ಕೊಲೆ ಕೇಸ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

Comments (0)

Your email address will not be published. Required fields are marked *

Back to top button