ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ವಿಚಾರ ದಿನದಿಂದ ದಿನಕ್ಕೆ ಕುತೂಹಲಕಾರಿ ವಿಚಾರವಾಗುತ್ತಿದೆ.. ಸಿಎಂ ಪಟ್ಟ ಯಾರಿಗೆ ಸಿಗುತ್ತೆ ಎಂಬ ಸುದ್ದಿ ರಾಜ್ಯದ ಭಾರೀ ಚರ್ಚೆಗೆ ಕಾರಣವಾಗಿದೆ.. ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಾನು ದೆಹಲಿಗೆ ಹೋದ ಮೇಲೆ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಅವರು ಸೇರಿದಂತೆ ಮುಖ್ಯ ನಾಯಕರನ್ನು ದೆಹಲಿಗೆ ಕರೆಸಿಕೊಂಡು ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ..
ದೆಹಲಿಗೆ ಹೊರಡುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಎಂಬುದು ಏಕಾಂಗಿ ಅಲ್ಲ. ಅದೊಂದು ತಂಡ. ಹೈಕಮಾಂಡ್ ಒಟ್ಟಿಗೆ ಕುಳಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಆ ಸಭೆಯಲ್ಲಿ ರಾಹುಲ್ ಗಾಂಧಿ ಕೂಡ ಇರುತ್ತಾರೆ. ಮುಂದೆ ಏನು ಮಾಡಬೇಕೆಂದು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಖರ್ಗೆ ಹೇಳಿದ್ದಾರೆ.
ರಾಹುಲ್ ಗಾಂಧಿ ಕೂಡ ಸಭೆಯಲ್ಲಿ ಇರುತ್ತಾರೆ. ಸಿಎಂ, ಡಿಸಿಎಂ ಇಬ್ಬರೂ ಇರುತ್ತಾರೆ. ಹೈಕಮಾಂಡ್ ಅಂದರೆ ಟೀಂ . ಹೈಕಮ್ಯಾಂಡ್ ಏಕಾಂಗಿ ಅಲ್ಲ .ಹೈಕಮಾಂಡ್ ಟೀಂ ಕುಳಿತು ಚರ್ಚಿಸಿ ನಿರ್ಣಯ ಕೈಗೊಳ್ಳುತ್ತೆ ಎಂದು ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಈ ಮೂಲಕ ಈ ವಾರದ ಅಂತ್ಯದೊಳಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರದೊಳಗಿನ ಬಿಕ್ಕಟ್ಟು ಅಂತ್ಯಗೊಳಿಸುವ ಸ್ಪಷ್ಟ ಸೂಚನೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ್ದಾರೆ.
ಇನ್ನು ನಿನ್ನೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ದೆಹಲಿಯಿಂದಲೇ ಕರ್ನಾಟಕದ ಸಮಸ್ಯೆಗಳಿಗೆ ಔಷಧಿ ನೀಡುತ್ತೇವೆ. ಹೈಕಮಾಂಡ್‌ನಲ್ಲಿ ನಾನಿದ್ದೇನೆ, ರಾಹುಲ್ ಗಾಂಧಿ ಇದ್ದಾರೆ, ಅಧಿನಾಯಕಿ ಸೋನಿಯಾ ಗಾಂಧಿ ಇದ್ದಾರೆ. ನಾವೆಲ್ಲ ಕುಳಿತು ಯೋಚಿಸಿ, ಏನು ಮಾಡಬೇಕು, ಯಾವ ಪರಿಹಾರ ನೀಡಬೇಕು ಎಂಬುದನ್ನು ನಿರ್ಧರಿಸುತ್ತೇವೆ ಎಂದು ಹೇಳಿದ್ದರು. ಆ ಮೂಲಕ ಕರ್ನಾಟಕ ಕಾಂಗ್ರಸ್ನಲ್ಲಿ ಸಮಸ್ಯೆ ಇದೆ ಎಂಬುದನ್ನು ಒಪ್ಪಿಕೊಂಡಿದ್ದರು.


