ಮೈಸೂರು: ಇನ್ನೂ ಎರಡೂವರೆ ವರ್ಷ ನನ್ನ ತಂದೆಯೇ ಮುಖ್ಯಂತ್ರಿಯಾಗಿರುತ್ತಾರೆ. ಹೈಕಮಾಂಡ್‌ಗೆ ಏನು ಮಾತು ಕೊಟ್ಟದ್ದಾರೋ ಅದೇ ರೀತಿ ಮುಖ್ಯಂತ್ರಿಗಳು ನಡೆದುಕೊಳ್ಳುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಮೇಲೆ ಯಾವ ಆರೋಪವೂ ಇಲ್ಲ. ಅವರನ್ನು ಕೆಳಗಿಳಿಸಲು ಯಾವ ಕಾರಣಗಳು ಇಲ್ಲ. ಯಾರೇ ಆಗಲಿ, ಹೈಕಮಾಂಡ್‌ಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು.
ನಾನೊಬ್ಬ ಪಕ್ಷದ ಕಾರ್ಯಕರ್ತನಾಗಿ ಹೇಳ್ತಿದ್ದೇನೆ. ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳನ್ನು ಬದಲಾಯಿಸುವ ವಾತಾವರಣ ನನಗೆ ಕಾಣುತ್ತಿಲ್ಲ. ಮುಖ್ಯಮಂತ್ರಿಗಳು ಒಳ್ಳೆಯ ಆಡಳಿತವನ್ನು ಕೊಟ್ಟಿದ್ದಾರೆ. ಶಾಸಕರೂ ಕೂಡ ಅವರ ಪರವಾಗಿದ್ದಾರೆ. ಹೀಗಿರುವಾಗ ನನ್ನ ಪ್ರಕಾರ, ಸಿಎಂ ಸ್ಥಾನ ಬದಲಾವಣೆ ಸಾಧ್ಯತೆ ಕಡಿಮೆ.
ಹಾಗಿದ್ದೂ ಕೂಡ ಕೆಲವರು ಸಿಎಂ ಬದಲಾವಣೆ ಆಗಲಿದೆ ಎಂದು ಹೇಳ್ತಿದ್ದಾರೆ. ಅದನ್ನು ನಿರ್ಧಾರ ಮಾಡೋದು ಹೈಕಮಾಂಡ್. ಅದರ ಬಗ್ಗೆ ನಾವು ಮಾತನಾಡಿದರೆ ಯಾವುದೇ ಪ್ರಯೋಜನ ಇಲ್ಲ. ಇವತ್ತಿನ ಪರಿಸ್ಥಿತಿಯಲ್ಲಿ ನನ್ನ ಪ್ರಕಾರ ಖಂಡಿತವಾಗಿಯೂ ಸಿದ್ದರಾಮಯ್ಯ ಮುಂದಿನ ಐದು ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.. ಇನ್ನು ಯಾರನ್ನು ಸಿಎಂ ಮಾಡಬೇಕು, ಯಾರನ್ನು ಮಾಡಬಾರದು ಎನ್ನುವುದು ನಮ್ಮ ಶಾಸಕರಿಗೆ ಮತ್ತು ನಮ್ಮ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಅದರ ಬಗ್ಗೆ ಬೇರೆಯವರ ಅಭಿಪ್ರಾಯ ಅನಗತ್ಯ ಎಂದು ಹೇಳುವ ಮೂಲಕ ಡಿಕೆಶಿ ಪರ ಬ್ಯಾಟ್ ಬೀಸಿದ್ದ ಆದಿಚುಂಚನಗಿರಿ ಮಠದ ಸ್ವಾಮೀಜಿಗೆ ಹೇಳಿಕೆಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದರು.


