ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.. ಯಡಿಯೂರಪ್ಪ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈ ಕೋರ್ಟ್ ನಿರಾಕರಿಸಿತ್ತು.
ಅದಾದ ಬಳಿಕ 1ನೇ ಫಾಸ್ಟ್ ಟ್ರ‍್ಯಾಕ್ ಕೋರ್ಟ್ ಬಿ.ಎಸ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿತ್ತು. ಸದ್ಯ ಈ ಸಂಬಂಧ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣ..?
ಬೆಂಗಳೂರಿನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಬಿಎಸ್‌ವೈ ಮೇಲಿದೆ. ಸಹಾಯ ಕೇಳಿ ಬಂದಾಗ ಯಡಿಯೂರಪ್ಪನವರು ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾರ್ಚ್ 2024ರಲ್ಲಿ ಬಾಲಕಿಯ ತಾಯಿ ದೂರು ನೀಡಿದ್ದರು.
ಸದಾಶಿವನಗರ ಪೊಲೀಸರು ಮಾರ್ಚ್ 14, 2024 ರಂದು ಪ್ರಕರಣ ದಾಖಲಿಸಿಕೊಂಡಿದ್ರು. ನಂತರ ಹೆಚ್ಚಿನ ತನಿಖೆಗಾಗಿ ಕೇಸ್ನನ್ನು ಸಿಐಡಿಗೆ ವರ್ಗಾಯಿಸಲಾಯಿತು. ಸಂಸ್ಥೆಯು ಎಫ್‌ಐಆರ್ ಮರು ದಾಖಲಿಸಿ, ಮಾಜಿ ಸಿಎಂ ವಿರುದ್ಧ ಆರೋಪಪಟ್ಟಿ ಸಲ್ಲಿಸಿತು. ದೂರುದಾರರು ಮತ್ತು ಅವರ ಮಗಳು 2024ರ ಫೆಬ್ರುವರಿಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರನ್ನು ಹಲವು ಬಾರಿ ಭೇಟಿಯಾಗಿದ್ದರು.


