ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಕೇಸ್ ವಿಚಾರದಲ್ಲಿ ಹೈ ಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಿದ್ದ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ..
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೈಸಿಂಗ್ ಜೊಯ್ಮಾಲ್ಯ ಅವರನ್ನೊಳಗೊಂಡ ಪೀಠ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿ, ಸಿಐಡಿ ಮತ್ತು ಸಂತ್ರಸ್ತ ಬಾಲಕಿಗೆ ನೋಟಿಸ್ ಜಾರಿ ಮಾಡಿದೆ..
ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸಲು ನವೆಂಬರ್ 13ರಂದು ಕರ್ನಾಟಕ ಹೈಕೋರ್ಟ್ ನಿರಾಕಾರಿಸಿತ್ತು. ಆ ಬೆನ್ನಲ್ಲೇ ಬಿಎಸ್ವೈ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.ಇದರ ಬೆನ್ನಲ್ಲೇ ಡಿಸೆಂಬರ್ 2 ರಂದು ಖುದ್ದು ಕೋರ್ಟ್ಗೆ ಹಾಜರಾಗುವಂತೆ ಆದೇಶ ನೀಡಿದ್ರು. ಈ ತೀರ್ಪು ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ರು.


