ಹಾವೇರಿ: ಚಿರತೆಗಳ ದಾಳಿಯಿಂದ ರೈತರು ಸಂಕಷ್ಟ ಅನುಭವಿಸುವಂತಾಗಿದ್ದು, ಕಡೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿದಿದ್ದಾರೆ..
ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಗ್ರಾಮದಲ್ಲಿ ಚಿರತೆಯನ್ನು ಅರಣ್ಯ ಅಧಿಕಾರಿಗಳು ಚಿರತೆಯನ್ನು ಹಿಡಿದಿದ್ದಾರೆ.. ಕಳೆದ ಒಂದು ತಿಂಗಳಿನಿಂದ ರೈತರ ಜಮೀನಿನ ಸುತ್ತ ಅಡ್ಡಾಡುತ್ತಿದ್ದು, ಚಿರತೆಯ ಭಯದಿಂದ ಕೃಷಿ ಕೆಲಸಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದರು.. ಇನ್ನು ತೋಟದ ಮನೆಯ ಸಿಸಿಟಿವಿಯಲ್ಲಿ ಚಿರತೆ ಓಡಾಡುವ ದೃಶ್ಯ ಸೆರೆಯಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಇದೀಗ ಚಿರತೆ ಬಿದ್ದುದ್ದು ಜನರು ನಿಟ್ಟುಸಿರು ಬಿಟ್ಟಿದ್ದಾರೆ..


