ಕನ್ನಡದ ನಿರ್ದೇಶಕರೊಬ್ಬರು ಹೃದಯಾಘಾತದಿಂದ ಸಿನಿಮಾ ಚಿತ್ರೀಕರಣದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.. ಪಾತ್ರಧಾರಿ ಎಂಬ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದ ಸಂಗೀತ್ ಸಾಗರ್ ಸಾವನ್ನಪ್ಪಿದ್ದಾರೆ.. ಸನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ ಸಂಭವಿಸಿ ಕೆಳಗೆ ಕುಸಿದು ಬಿದ್ದಿದ್ದಾರೆ. ಈ ವೇಳೆ ತಕ್ಷಣ ಅವರನ್ನ ಆಸ್ಪತ್ರಗೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ..
ಪಾತ್ರಧಾರಿ ಸಿನಿಮಾದ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಅವಘಡವಾಗಿದೆ. ಸಿನಿಮಾದ ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕರಾಗಿ ಸಂಗೀತ್ ಸಾಗರ್ ಕೆಲಸ ಮಾಡುತ್ತಿದ್ದರು. ಎಂಟಕ್ಕೂ ಹೆಚ್ಚು ಕನ್ನಡ ಚಿತ್ರಗಳನ್ನು ಇವರು ನಿರ್ದೇಶಿಸಿದ್ದರು. ಇವರು ಸಕಲೇಶಪುರದ ದೊಡ್ಡನಾಗರ ಮೂಲದವರು.


