ಬೆಂಗಳೂರು: ಬಿಜೆಪಿ ಜೊತೆ ಸೇರ್ಪಡೆಗೊಂಡ ನಂತರ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ..
ಭಗವದ್ಗೀತೆಯನ್ನ ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್‌ಗೆ ಮನವಿ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಗುತ್ತಿದೆ. ಸಂವಿಧಾನ ಪ್ರತಿಯೊಬ್ಬರಿಗೂ ಅರಿವಿಗೆ ಬರಬೇಕು. ಅದರಲ್ಲಿಯೂ ಮಕ್ಕಳಿಗೆ ತಮ್ಮ ಹಕ್ಕುಗಳೇನು, ಬಾಧ್ಯತೆಗಳೇನು ಎನ್ನುವುದು ಅರ್ಥ ಆಗಬೇಕು.
ಇದರಿಂದಲೇ ಮಕ್ಕಳ ಪಠ್ಯದಲ್ಲಿ ಸಂವಿಧಾನದ ಪೀಠಿಕೆಯನ್ನು ಅಳವಡಿಸಿದ್ದೇವೆ ಎನ್ನುವುದರ ಜೊತೆಗೆ ಅಂಬೇಡ್ಕರರ ಸಾಮಾಜಿಕ ನ್ಯಾಯದ ಹೋರಾಟವನ್ನು ಒತ್ತಿ ಹೇಳಿದ್ದಾರೆ ಎಂದು ಹೇಳಿದರು.. ಇನ್ನು ಇದೇ ವಿಚಾರಕ್ಕೆ ಬೆಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಅವರಿಗೆ ಏನು ಅನಿಸಿದೆಯೋ ಅದನ್ನ ಕೇಂದ್ರಕ್ಕೆ ಬರೆದಿದ್ದಾರೆ. ಅದೆಲ್ಲ ಕೇಂದ್ರ ಸರ್ಕಾರಕ್ಕೆ ಬಿಟ್ಟ ವಿಚಾರ ಅಂತ ತಿಳಿಸಿದ್ರು.


