ಬೆಂಗಳೂರು: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಾಳೆಯಿಂದ ಚಳಿಗಾಲದ ಅಧಿವೇಶನ ನಡೆಯಲಿದೆ..
ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಜಿಲ್ಲಾಡಳಿತದಿಂದ ಈಗಾಗಲೇ 3 ಸಾವಿರ ರೂಮ್ ಬುಕ್ ಆಗಿದ್ದು, ಸಿಎಂ ಮತ್ತು ಡಿಸಿಎಂಗೆ ಅತಿಥಿ ಗೃಹದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಶಾಸಕರು, ಅಧಿಕಾರಿಗಳ ವಸತಿಗಾಗಿ 3 ಸಾವಿರ ಕೋಠಡಿಗಳು ಬುಕ್ಕಿಂಗ್ ಆಗಿವೆ. ಬೆಳಗಾವಿಯಲ್ಲಿ ಈವರೆಗೆ 13 ಬಾರಿ ಉಭಯ ಸದನಗಳ ಅಧಿವೇಶನ ನಡೆದಿದ್ದು, ಈ ಬಾರಿ ಅಧಿವೇಶನಕ್ಕೆ 21 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ..
ಚಳಿಗಾಲದ ಅಧಿವೇಶನದ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಬಾರಿ ನಗರದಲ್ಲಿ ಹೆಚ್ಚುವರಿ ಭದ್ರತೆ ನಿಯೋಜನೆ ಮಾಡಲಾಗಿದೆ.. ವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಬಾರಿ ಬೆಳಗಾವಿ ನಗರದಲ್ಲಿ ಹೆಚ್ಚುವರಿ ಭದ್ರತೆ ನಿಯೋಜನೆ ಮಾಡಲಾಗಿದೆ. ದೆಹಲಿಯಲ್ಲಿ ಉಗ್ರರಿಂದ ಕಾರು ಸ್ಫೋಟ ಪ್ರಕರಣ ಹಿನ್ನೆಲೆ ಅಧಿವೇಶನದ ವೇಳೆ ಎಚ್ಚರವಹಿಸುವಂತೆ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಕಾರಣ ಬೆಳಗಾವಿ ಸುವರ್ಣಸೌಧದ ಸುತ್ತಮುತ್ತ ಹೈಅಲರ್ಟ್ ಘೋಷಿಸಲಾಗಿದೆ.
ಹೆಚ್ಚುವರಿಯಾಗಿ 6 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದ್ದು, ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಆರು ಎಸ್ಪಿ ಱಂಕ್ ಮಟ್ಟದ ಪೊಲೀಸ್ ಅಧಿಕಾರಿಳು, 146 ಹಿರಿಯ ಪೊಲೀಸ್ ಅಧಿಕಾರಿಗಳು, 3,820 ಪೊಲೀಸ್ ಸಿಬ್ಬಂದಿ, 500 ಹೋಂ ಗಾರ್ಡ್ಸ್, 8 ಕ್ಷಿಪ್ರ ಕಾರ್ಯಪಡೆ, 10 ಡಿಎಆರ್ ತುಕಡಿ, 35 ಕೆಎಸ್‌ಆರ್‌ಪಿ ತುಕಡಿ, 1 ಬಿಡಿಡಿಎಸ್ ತಂಡ, 1 ಗರುಡಾ ಫೋರ್ಸ್, 16 ವಿಧ್ವಂಸಕ ಕೃತ್ಯ ತಪಾಸಣೆ ತಂಡಗಳು ಭದ್ರತೆಗಾಗಿ ನಿಯೋಜನೆಗೊಂಡಿವೆ. ಸುವರ್ಣ ವಿಧಾನಸೌಧ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಇರಲಿದ್ದು, ಸುವರ್ಣ ಗಾರ್ಡನ್ ಮತ್ತು ಅಲಾರವಾಡ ಬಳಿ ಪ್ರತಿಭಟನೆಗಳಿಗೆ ಸ್ಥಳ ನಿಗದಿ ಮಾಡಲಾಗಿದೆ. 6 ಸಾವಿರ ಪೊಲೀಸ್ ಸಿಬ್ಬಂದಿ ಜರ್ಮನ್ ಟೆಂಟ್ ವ್ಯವಸ್ಥೆ ಮಾಡಲಾಗಿದೆ.
ಸಿಎಂ ಕುರ್ಚಿಗಾಗಿ ರಾಜ್ಯ ಸರ್ಕಾರದಲ್ಲಿ ಹಗ್ಗ ಜಗ್ಗಾಟ ನಡೆಯುತ್ತಿರುವ ಹಿನ್ನಲೆ ಅಧಿವೇಶನದಲ್ಲಿ ಅವಿಶ್ವಾಸ ನಿಲುವಳಿ ಮಂಡನೆಗೆ ವಿಪಕ್ಷ ಬಿಜೆಪಿ ಚಿಂತಿಸಿತ್ತು. ಆದರೆ ಈಗ ತನ್ನ ನಿರ್ಧಾರದಿಂದ ಕಮಲಪಡೆ ಹಿಂದೆ ಸರಿದಿದೆ. ಕಳೆದ ವಾರ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ, ಅವಿಶ್ವಾಸ ಮಂಡನೆಗೆ ಮುಂದಾಗದಂತೆ ಬಿಜೆಪಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ಅವಿಶ್ವಾಸ ಮಂಡನೆ ಮಾಡಿದರೆ ಕಾಂಗ್ರೆಸ್ನಲ್ಲಿ ಒಗ್ಗಟ್ಟು ಸೃಷ್ಟಿಯಾಗುತ್ತದೆ. ಹೀಗಾಗಿ ಒಗ್ಗಟ್ಟಾಗುವುದಕ್ಕೆ ಅವಕಾಶ ಕೊಡುವುದು ಬೇಡ ಎಂದು HDK ಸಲಹೆ ಹಿನ್ನಲೆ ಬಿಜೆಪಿ ನಿರ್ಧಾರ ಬದಲಾಯಿಸಿದೆ ಎನ್ನಲಾಗಿದೆ.


