Freedom TV

ಇಂದು ರಾತ್ರಿಯಿಂದ 3 ದಿನ ಪೀಣ್ಯ ಫ್ಲೈ ಓವರ್ ಬಂದ್.!

ಬೆಂಗಳೂರು : ಹಬ್ಬದ ಮರುದಿನವೇ ಬೆಂಗಳೂರು ವಾಹನ ಸವಾರರಿಗೆ ಬಿಗ್ ಶಾಕ್ ಆಗಿದೆ…ಇಂದಿನಿಂದ ಪೀಣ್ಯ ಫ್ಲೈ ಓವರ್ ಬಂದ್ ಆಗಲಿದೆ. ಇಂದು ರಾತ್ರಿ 11 ಗಂಟೆಯಿಂದ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಲೋಡ್ ಟೆಸ್ಟಿಂಗ್ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಇಂದು ರಾತ್ರಿ 11 ಗಂಟೆಯಿಂದ ಜ.19 ರ ಬೆಳಗ್ಗೆ 11 ಗಂಟೆ ತನಕ ಬಂದ್ ಆಗಲಿದೆ.

ಯಾಕೆ ನಿರ್ಬಂಧ?

ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಎಲಿವೇಟೆಡ್ ಹೈವೇ ಡಾ.ಶಿವಕುಮಾರ ಸ್ವಾಮೀಜಿ ಮೇಲ್ಸೆತುವೆಗೆ ಅಳವಡಿಸಿದ್ದ ವಯಾಡಕ್ಟ್ ದುರಸ್ತಿ ಕಾರ್ಯ ಇದೆ. ವಯಾಡಕ್ಟ್ ನ ಸಮಗ್ರತೆ ಪರಿಶೀಲನೆ ಮತ್ತು ಲೋಡ್ ಟೆಸ್ಟಿಂಗ್ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಪರ್ಯಾಯ ಮಾರ್ಗ

ನೆಲಮಂಗಲ ಕಡೆಯಿಂದ ಬೆಂಗಳೂರು ನಗರಕ್ಕೆ ಫ್ಲೈ ಓವರ್ ರಸ್ತೆಯ ಮೂಲಕ ಸಾಗುವ ವಾಹನಗಳು ಕೆನ್ನಮೆಟಲ್ ವಿಡಿಯಾ ಹತ್ತಿರ ಫ್ಲೈಓವರ್ ಪಕ್ಕದ ಎನ್ ಹೆಚ್-4, ಸರ್ವಿಸ್ ರಸ್ತೆಯ ಮೂಲಕ 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಎಸ್​ಆರ್​ಎಸ್ ಜಂಕ್ಷನ್ ಮೂಲಕ ಗೊರಗುಂಟೆಪಾಳ್ಯ ತಲುಪಬಹುದು. ಇನ್ನು ಸಿಎಂಟಿಐ ಜಂಕ್ಷನ್​ನಿಂದ ನೆಲಮಂಗಲ ಕಡೆಗೆ ಫ್ಲೈ ಓವರ್ ರಸ್ತೆಯಲ್ಲಿ ಸಾಗುವ ವಾಹನಗಳು ಪಾರ್ಲೆ-ಜಿ ಟೋಲ್ ತಲುಪಲು ಫ್ಲೈ ಓವರ್ ಪಕ್ಕದ ಎನ್ ಹೆಚ್-4 ಮತ್ತು ಸರ್ವಿಸ್ ರಸ್ತೆಯಲ್ಲಿ SRS ಜಂಕ್ಷನ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ- 8ನೇ ಮೈಲಿ ಮುಖಾಂತರ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ

Comments (0)

Your email address will not be published. Required fields are marked *

Back to top button