Monday, December 8, 2025
24.9 C
Bengaluru
Google search engine
LIVE
ಮನೆರಾಜಕೀಯಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ

ಬೆಳಗಾವಿ: ಇಂದಿನಿಂದ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ.. ಅಧಿವೇಶನದ ಹಿನ್ನೆಲೆ ಈ ಬಾರಿ ಬೆಳಗಾವಿಯಲ್ಲಿ ಭಾರೀ ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ.. ಆಡಳಿತ ಪಕ್ಷ ಹಾಗೂ ವಿಪಕ್ಷಗಳು ಮಾತಿನ ಯುದ್ಧಕ್ಕೆ ಸಜ್ಜಾಗಿವೆ.. ಇಂದಿನಿಂದ ಡಿಸೆಂಬರ್​​ 19 ವರಗೆ ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಮೊದಲ ದಿನಬಾದ ಇಂದು ಅಗಲಿದ ಗಣ್ಯರಿಗೆ ಸಂತಾಪ ಸೂಚಕ ಸಭೆ ನಡೆಯಲಿದೆ..

ತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚನಾ ನಿರ್ಣಯ ನಡೆಯಲಿದೆ. ಪದ್ಮಶ್ರೀ ಸಾಲುಮರದ ತಿಮ್ಮಕ್ಕ, ಹಾಲಿ ಶಾಸಕರಾಗಿದ್ದ ಹೆಚ್‌.ವೈ ಮೇಟಿ, ಮಾಜಿ ಶಾಸಕ ಆ‌ರ್.ವಿ ದೇವರಾಜು, ಬಾಲಿವುಡ್ ನಟ ಧರ್ಮೇಂದ್ರ, ಹಿರಿಯ ನಟ ಉಮೇಶ್, ಹರೀಶ್ ರಾಯ್, ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್, ಐಎಎಸ್‌ ಅಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ ಹಲ ಗಣ್ಯರಿಗೆ ಸಂತಾಪ ಸೂಚನಾ ಸಭೆ ನಡೆಯಲಿದೆ.
ಬಳಿಕ ಹಾಲಿ ಶಾಸಕ ಹೆಚ್.ವೈ ಮೇಟಿ ನಿಧನದ ಹಿನ್ನೆಲೆಯಲ್ಲಿ ಕಲಾಪವನ್ನ ನಾಳೆಗೆ ಮುಂದೂಡಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನರ್‌ರಚನೆಯ ಚರ್ಚೆ ಒಂದು ಹಂತಕ್ಕೆ ಶಮನಗೊಂಡಿದ್ದರೂ, ಒಳಬೇಗುದಿ ಇನ್ನೂ ನಿಂತಿಲ್ಲ. ಈ ಮಧ್ಯೆ ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸಲು ನಿರ್ಧರಿಸಿದ್ದು, ಯಾವುದೇ ಪರಿಸ್ಥಿತಿಯಲ್ಲಿ ಪ್ರತಿಪಕ್ಷಗಳನ್ನು ಎದುರಿಸಲು ಸರ್ಕಾರ ಸರ್ವ ಸಿದ್ಥತೆಗಳನ್ನು ನಡೆಸಿದೆ. ಇನ್ನು, ಕಬ್ಬಿಗೆ, ಮೆಕ್ಕೆಜೋಳ, ಹಸಿರು, ಉದ್ದು ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಮತ್ತೆ ರೈತರು ಹೋರಾಟ ನಡೆಸಲು ಮುಂದಾಗಿದ್ದಾರೆ.

ಸರ್ಕಾರದ ಮೇಲೆ ಮುಗಿಬಿದ್ದು, ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿ ರಣತಂತ್ರ ರೂಪಿಸಿದೆ. ಇತ್ತ ವಿಪಕ್ಷಗಳ ಅಸ್ತಗಳನ್ನು ಎದುರಿಸಲು ಸರ್ಕಾರ ಕೂಡ ರೆಡಿಯಾಗಿದೆ. ಸಿಎಂ ಕುರ್ಚಿಗಾಗಿ ರಾಜ್ಯ ಸರ್ಕಾರದಲ್ಲಿ ಹಗ್ಗ ಜಗ್ಗಾಟ ನಡೆಯುತ್ತಿರುವ ಹಿನ್ನೆಲೆ ಅಧಿವೇಶನದಲ್ಲಿ ಅವಿಶ್ವಾಸ ನಿಲುವಳಿ ಮಂಡನೆಗೆ ವಿಪಕ್ಷ ಬಿಜೆಪಿ ಚಿಂತಿಸಿತ್ತು. ಆದರೆ, ಈಗ ತನ್ನ ನಿರ್ಧಾರದಿಂದ ಕಮಲಪಡೆ ಹಿಂದೆ ಸರಿದಿದೆ.
ಬೆಳಗಾವಿಯ ಚಳಿಗಾಲದ ಅಧಿವೇಶನದ ಸಂದರ್ಭದಲ್ಲೇ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments