Tuesday, January 27, 2026
26.9 C
Bengaluru
Google search engine
LIVE
ಮನೆUncategorizedಜವರಾಯನ ಅಟ್ಟಹಾಸ.. ಮೂವರು ಸ್ನೇಹಿತರು ಅಪಘಾತದಲ್ಲಿ ದುರ್ಮರಣ

ಜವರಾಯನ ಅಟ್ಟಹಾಸ.. ಮೂವರು ಸ್ನೇಹಿತರು ಅಪಘಾತದಲ್ಲಿ ದುರ್ಮರಣ

ಬೆಂಗಳೂರು: ಕಾರು ಹಾಗೂ ಕೆಎಸ್​ಆರ್​​ಟಿಸಿ ಬಸ್​ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.. ಬಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್​ ಬಳಿ ಈ ಭೀಕರ ಘಟನೆ ಸಂಭವಿಸಿದೆ.. ಮೃತರೆಲ್ಲಾ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ. ಮೋಹನ್ ಕುಮಾರ್ (33), ಸುಮನ್ (28), ಸಾಗರ್ (23) ಮೃತ ದುರ್ದೈವಿಗಳಾಗಿದ್ದಾರೆ.

ಚಿಕ್ಕಬಳ್ಳಾಪುರ ದಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರು ಅತಿವೇಗದಲ್ಲಿ ಸಂಚರಿಸುತ್ತಿತ್ತು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್​​ ಹಾರಿ ಎದುರುಗಡೆಯಿಂದ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್‌ಗೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಹಾಗೂ ಕೆಎಸ್​ಆರ್​ಟಿಸಿ ಬಸ್​ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆಯಲು ಹರಸಾಹಸ ಪಟ್ಟಿದ್ಧಾರೆ..

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments