ಬೆಂಗಳೂರು: ಕಾಂಗ್ರೆಸ್ನ ಪ್ರಭಾವಿ ರಾಜಕಾರಣಿ ಹೆಚ್.ಎಂ ರೇವಣ್ಣ ಅವರ ಪುತ್ರ ಶಶಾಂಕ್ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿ ನಡೆದಿದೆ..
23 ವರ್ಷದ ರಾಜೇಶ್ ಬಿ.ಜಿ ಮೃಯ ಯುವಕ. ನಿನ್ನೆ ರಾತ್ರಿ 10:30 ರ ಸುಮಾರಿಗೆ ಮೃತ ಯುವಕ ದಾಬಸ್ ಪೇಟೆಯಿಂದ ಬರುತ್ತಿದ್ದ. ಈ ವೇಳೆ ಎಂ ರೇವಣ್ಣ ಪುತ್ರ ಶಶಾಂಕ್ ಫಾರ್ಚೂನರ್ ಬೈಕ್ಗೆ ಡಿಕ್ಕಿಯಾಗಿದೆ. ಬಳಿಕ ಕಾರನ್ನ ನಿಲ್ಲಿಸದೇ ಅಲ್ಲಿಂದ ಅಪಘಾತ ಎಸಗಿದ ಬಳಿಕ ಶಶಾಂಕ್ ಕಾರಿನೊಂದಿಗೆ ಪರಾರಿಯಾಗಿದ್ದರು. ಈ ವಿಚಾರ ತಿಳಿದ ಸ್ಥಳೀಯರು 5 ಕಿ.ಮೀ. ಹಿಂಬಾಲಿಸಿ ಸನ್ ಫ್ಲವರ್ ಫ್ಯಾಕ್ಟರಿ ಬಳಿ ಅಡ್ಡಗಟ್ಟಿ ಕಾರನ್ನು ತಡೆದು ನಿಲ್ಲಿಸಿದ್ದಾರೆ.
ಕಾರಿನಿಂದ ಇಳಿದ ಬಳಿಕ ಶಶಾಂಕ್ ನಾನು ಯಾರು ಗೊತ್ತಾ. ಹೆಚ್‌ಎಂ ರೇವಣ್ಣ ಪುತ್ರ ಎಂದು ಅವಾಜ್ ಹಾಕಿದ್ದಾರೆ. ನಂತರ ಕಾರನ್ನು ಬದಿಯಲ್ಲಿ ನಿಲ್ಲಿಸುತ್ತೇನೆ ಎಂದು ಹೇಳಿ ಶಶಾಂಕ್ ಪರಾರಿಯಾಗಿದ್ದಾರೆ. ಕಾರಿನಲ್ಲಿ ರೇವಣ್ಣ ಕುಟುಂಬಸ್ಥರು ಇದ್ದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಹಿಟ್ ಆಂಡ್ ರನ್ ವಿಚಾರ ದೊಡ್ಡದಾಗುತ್ತಿದ್ದಂತೆ ತಡರಾತ್ರಿ ಫಾರ್ಚೂನರ್ ಕಾರನ್ನು ಕುದೂರು ಪೊಲೀಸ್ ಠಾಣೆಗೆ ತರಲಾಗಿದೆ. ಇನ್ನು ಮೃತ ರಾಜೇಶ್, ಮಾಗಡಿ ತಾಲೂಕಿನ ಬೆಳಗುಂಬ ಗ್ರಾಮದ ನಿವಾಸಿ. ದಾಬಸ್ ಪೇಟೆಯಲ್ಲಿರುವ ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ. ರಾತ್ರಿ ಕೆಲಸ ಮುಗಿಸಿ ಸ್ಕೂಟಿಯಲ್ಲಿ ವಾಪಸ್ ಆಗುತ್ತಿದ್ದಾಗ ಅಪಘಾತವಾಗಿದೆ.


