Tuesday, January 27, 2026
26.7 C
Bengaluru
Google search engine
LIVE
ಮನೆರಾಜಕೀಯಔತಣಕೂಟವೂ ಅಲ್ಲ, ಏನೂ ಅಲ್ಲ.. ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನೋಕೆ ಆಗುತ್ತದೆಯೇ: ಡಿಕೆಶಿ

ಔತಣಕೂಟವೂ ಅಲ್ಲ, ಏನೂ ಅಲ್ಲ.. ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನೋಕೆ ಆಗುತ್ತದೆಯೇ: ಡಿಕೆಶಿ

ಬೆಳಗಾವಿ: ಪ್ರೀತಿಯಿಂದ ನಮ್ಮ ಸ್ಥಳೀಯ ಕ್ಷೇತ್ರದವರು ಊಟಕ್ಕೆ ಕರೆದರೆ ಬರಲ್ಲ ಎನ್ನಲು ಆಗುತ್ತದೆಯೇ ಎಂದು ಡಿಸಿಎಂ ಡಿ.ಕೆ ಶಿವಕುಮಾರ್​ ಅವರು ಹೇಳಿದ್ದಾರೆ..

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ಔತಣಕೂಟವೂ ಇಲ್ಲ, ಏನೂ ಇಲ್ಲ.ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ. ಪ್ರತಿದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಊಟವನ್ನು ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು ಯಾವ ಔತಣಕೂಟವೂ ಅಲ್ಲ, ಏನೂ ಅಲ್ಲ ಎಂದು ಹೇಳಿದ್ಧಾರೆ.

ಇನ್ನು ನನ್ನ ಕ್ಷೇತ್ರದ ಹುಡುಗನೊಬ್ಬ ಇಲ್ಲಿ ಕೆಲಸ ಮಾಡುತ್ತಿದ್ದಾನೆ. ಆತನ ಮನೆಯಿಂದ ಇವತ್ತು ಮುದ್ದೆ, ಉಪ್ಸಾರು ಊಟ ಮಾಡಿ ಕಳಿಸುತ್ತೇವೆ ಎನ್ನುತ್ತಿದ್ದಾನೆ. ಹೀಗೆ ಅವರು ಪ್ರೀತಿಯಿಂದ ಕರೆದಾಗ ಬೇಡ ಎನ್ನಲು ಆಗುತ್ತದೆಯೇ? ನಾಳಿದ್ದು ನಮ್ಮ ಆಸೀಫ್ ಸೇಠ್, ಫಿರೋಜ್ ಸೇಠ್ ಅವರು ಊಟಕ್ಕೆ ಕರೆದಿದ್ದಾರೆ ಎಂದು ತಿಳಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಬೆಂಗಳೂರಿನ ಗೌರವ ಉಳಿಸಲು ನಾವು ಅಗತ್ಯ ಕ್ರಮ ಕೈಗೊಂಡಿದ್ದೇವೆ. ಮುಂದೆ ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಕೈಗೊಂಡು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಈ ವಿಚಾರದಲ್ಲಿ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಜವಾಬ್ದಾರಿಯನ್ನು ಗೃಹ ಸಚಿವ ಪರಮೇಶ್ವರ್ ಅವರಿಗೆ ವಹಿಸಲಾಗಿದೆ. ಕೆಎಸ್‌ಸಿಎ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಅವರ ತಂಡ ಹಾಗೂ ಪೊಲೀಸ್ ಅಧಿಕಾರಿಗಳು ಕೂತು ಚರ್ಚೆ ಮಾಡಲಿದ್ದಾರೆ ಎಂದಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments