
ದೇವನಹಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವದ ಬದಲಾವಣೆ ಚರ್ಚೆ ಮತ್ತೆ ಜೋರಾಗಿದೆ. ಶಾಸಕ ಇಕ್ಬಾಲ್ ಹುಸೇನ್ ಅವರು ಜನವರಿ 6 ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಹೇಳಿಕೆ ಸದ್ಯ ಸಂಚನ ಸೃಷ್ಟಿಸಿದೆ. ಇದೀಗ ಡಿಕೆ ಶಿವಕುಮಾರ್ ಆಪ್ತ ಇಕ್ಬಾಲ್ ಹುಸೇನ್ ನೀಡಿರುವ ಹೇಳಿಕೆ ವಿಚಾರಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು, ಇಕ್ಬಾಲ್ ಹುಸೇನ್ ಮಾತನ್ನು ಯಾರು ನಂಬಬೇಡಿ. ಹುಸೇನ್ ಮೇಲೆ ಮೊದಲು ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.
ದೇವನಹಳ್ಳಿಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಇಕ್ಬಾಲ್ ಹುಸೇನ್ಗೆ ಮಾತಿನ ಚಟ. ಯಾರು ಅವನ ಮಾತನ್ನು ನಂಬಲು ಹೋಗಬೇಡಿ ಎಂದು ಸಿಡಿಮಿಡಿಗೊಂಡಿದ್ದಾರೆ. ಇನ್ನು ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, 140 ಶಾಸಕರಿಗೂ ಡಿ.ಕೆ.ಶಿವಕುಮಾರ್ ಅಧ್ಯಕ್ಷರು. ಮೊದಲು ನೋಟಿಸ್ ಕೊಟ್ಟಿದ್ದಾರೆ, ಈಗಲೂ ಒಂದೆರಡು ಕೊಡಲಿ. ನೋಟಿಸ್ ಕೊಟ್ಟರೆ ನಾನು ಪಾಲನೆ ಮಾಡಬೇಕಾಗುತ್ತೆ. ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.
ಈ ವಿಚಾರವಾಗಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ನಾನು ಹೈಕಮಾಂಡ್ ಹೇಳಿದ್ದಂತೆ ಕೇಳುತ್ತೇನೆ ಎಂದಿದ್ದಾರೆ. ಆ ಮೂಲಕ ಸಿಎಂ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.




