Freedom TV

ಮಠಗಳಿಂದ ಸಂಸ್ಕೃತಿ, ಸಂಸ್ಕಾರ ಬೆಳೆಸುವ ಕೆಲಸ – ಶೋಭಾ ಕರಂದ್ಲಾಜೆ

ನಂಜನಗೂಡು: ದೇಶದಲ್ಲಿ ಸಂಸ್ಕೃತಿ, ಸಂಸ್ಕಾರವನ್ನು ಬೆಳೆಸುವ ದೊಡ್ಡ ಕೆಲಸವನ್ನು ಮಠಮಾನ್ಯಗಳು ನಿರ್ವಹಿಸುತ್ತೆವೆ, ಪುಸ್ತಕದ ಶಿಕ್ಷಣದ ಜೊತೆಗೆ ಜನರಿಗೆ ಮೌಲ್ಯದ ಶಿಕ್ಷಣವನ್ನು ನೀಡುತ್ತಿವೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ..

ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ರಾಜ್ಯಮಟ್ಟದ ಭಜನಾಮೇಳ ಮತ್ತು ದೇಶಿ ಆಟಗಳು ಸೋಬಾನೆ ಪದ ರಂಗೋಲಿ ಸ್ಪರ್ಧೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು,

ಭಾರತದ ಅಸ್ತಿತ್ವವಿರುವುದು ಆಧ್ಯಾತ್ಮಿಕತೆಯಲ್ಲಿ, ಆಧ್ಯಾತ್ಮಿಕತೆ ಇಲ್ಲದೆ ಭಾರತವಿಲ್ಲ, ನಮ್ಮ ಸಂಸ್ಕೃತಿ, ಧರ್ಮ, ಆಚಾರ, ವಿಚಾರ, ನಮ್ಮ ದೇವಾಲಯಗಳಲ್ಲಿದೆ, ದೇಶದಲ್ಲಿ ಶಾಂತಿ ನೆಲೆಸಲು ಆಧ್ಯಾತ್ಮಿಕತೆಯಿಂದ ಮಾತ್ರ ಸಾಧ್ಯ ಎಂದು ಕೇಂದ್ರ ಕಾರ್ಮಿಕ, ಉದ್ಯೋಗ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಸಂಸ್ಕೃತಿ ಸಂಸ್ಕಾರವನ್ನು ಬೆಳೆಸುವ ದೊಡ್ಡ ಕೆಲಸವನ್ನು ಮಠಮಾನ್ಯಗಳು ನಿರ್ವಹಿಸುತ್ತಿವೆ, ಪುಸ್ತಕದ ಶಿಕ್ಷಣದ ಜೊತೆಗೆ ಜನರಿಗೆ ಮೌಲ್ಯದ ಶಿಕ್ಷಣವನ್ನು ನೀಡುತ್ತಿವೆ, ಆದ್ದರಿಂದ ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ, ದೇಶದ ಉಳಿವಿನ ಜೊತೆಗೆ ನಮ್ಮ ಆಚಾರ ವಿಚಾರಗಳನ್ನು ಉಳಿಸಿಕೊಳ್ಳಬೇಕಿದೆ, ನಮ್ಮ ಮುಂಬರುವ ಪೀಳಿಗೆಗೂ ಸಹ ನಮ್ಮ ಆಚಾರ ವಿಚಾರ ಸಂಸ್ಕೃತಿಯನ್ನು ತಿಳಿಸುವ ಕೆಲಸ ಮಾಡಬೇಕಿದೆ ಎಂದರು.

Comments (0)

Your email address will not be published. Required fields are marked *

Back to top button