ರಾಜ್ಯಸುದ್ದಿ

ಶಾಂತಿ ನೆಮ್ಮದಿ ಕಾಪಾಡುವ ಕಾರ್ಯವನ್ನು ಪೊಲೀಸ್ ಇಲಾಖೆ ಮಾಡುತ್ತಿದೆ- ಸಿಎಂ

ಬೆಂಗಳೂರು: ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡುವ ಗುರುತರವಾದ ಕಾರ್ಯವನ್ನು ರಾಜ್ಯದ ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಇಂದು ಬೆಂಗಳೂರಿನ ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರ ಕಚೇರಿಯಲ್ಲಿ ಆಯೋಜಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ರಕ್ಷಣೆ ಒದಗಿಸುವುದು, ನ್ಯಾಯ ಒದಗಿಸುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ.

ಇದಕ್ಕೆ ಪೊಲೀಸ್ ಇಲಾಖೆ ಪೂರಕವಾಗಿ ಕೆಲಸ ಮಾಡಬೇಕು. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಅವಕಾಶ, ರಕ್ಷಣೆಯನ್ನು ಒದಗಿಸಿದೆ. ಕಾನೂನು ಎಲ್ಲರಿಗೂ ಒಂದೇ. ಯಾರು ತಪ್ಪು ಮಾಡಿದರೂ ಅದು ತಪ್ಪೇ. ಬಲಾಢ್ಯರು, ಸಮಾಜ ಘಾತುಕ ಶಕ್ತಿಗಳಿಗೆ ಯಾವುದೇ ಕಾರಣಕ್ಕೂ ಮಣೆ ಹಾಕಬಾರದು. ದುರ್ಬಲರು, ಪರಿಶಿಷ್ಟ ಜಾತಿ, ವರ್ಗದ ಜನರು, ಧಾರ್ಮಿಕ ಅಲ್ಪಸಂಖ್ಯಾತರ ರಕ್ಷಣೆ ಎಲ್ಲರ ಹೊಣೆ. ದುರ್ಬಲರು ಯಾವುದೇ ಕಾರಣಕ್ಕೂ ಅನ್ಯಾಯಕ್ಕೆ ಒಳಗಾಗಬಾರದು. ಪ್ರತಿಯೊಬ್ಬರಿಗೂ ಸಮಾನ ನ್ಯಾಯ ಒದಗಿಸುವುದು ಪೊಲೀಸರ ಕರ್ತವ್ಯವಾಗಿದೆ.

ರಾಜ್ಯದಲ್ಲಿ ಕೆಲವು ಪೊಲೀಸ್​​ ಠಾಣೆಗಳು ಉತ್ತಮ ಕೆಲಸ ಮಾಡುತ್ತಿವೆ. ಇನ್ನೂ ಕೆಲವು ಠಾಣೆಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಪೊಲೀಸ್​​ ಅಧಿಕಾರಿಗಳಿಗೆ ಗೊತ್ತಾಗದೇ ಕ್ರೈಂ ನಡೆಯಲು ಸಾಧ್ಯವಿಲ್ಲ, ಪೊಲೀಸರು ಬಲಾಢ್ಯರ ಕೈಗೊಂಬೆಯಂತೆ ಕೆಲಸ ಮಾಡಬಾರದು. ರಾಯಚೂರಿನ ಕವಿತಾಳ ಠಾಣೆ ದೇಶದಲ್ಲೇ 3ನೇ ಸ್ಥಾನ ಪಡೆದುಕೊಂಡಿದೆ‌ ಎಂದರು.

ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡುವ ಗುರುತರವಾದ ಕಾರ್ಯವನ್ನು ರಾಜ್ಯದ ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಮಾಡುತ್ತಿದೆ. ಪ್ರತಿಯೊಬ್ಬರಿಗೂ ರಕ್ಷಣೆ ಒದಗಿಸುವುದು, ನ್ಯಾಯ ಒದಗಿಸುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ಇದಕ್ಕೆ ಪೊಲೀಸ್ ಇಲಾಖೆ ಪೂರಕವಾಗಿ ಕೆಲಸ ಮಾಡಬೇಕು.

ನಮ್ಮಲ್ಲಿ ಕಳ್ಳತನ, ಸುಲಿಗೆ, ದರೋಡೆ ಪ್ರಕರಣ ಕಡಿಮೆ ಆಗುತ್ತಿದೆ. ಆದರೆ ಸೈಬರ್ ಕ್ರೈಂ ಮತ್ತು ಡ್ರಗ್ಸ್ ಪೆಡ್ಲಿಂಗ್ ಜಾಸ್ತಿ‌ ಆಗುತ್ತಿದೆ. ಡ್ರಗ್ಸ್ ಮುಕ್ತ ರಾಜ್ಯ ಮಾಡಬೇಕೆಂದು ನಮ್ಮ ಸರ್ಕಾರದಿಂದ ಹೋರಾಟ ಮಾಡಲಾಗುತ್ತಿದೆ. ಪೊಲೀಸರು ಸರಿಯಾಗಿ ಕೆಲಸ ಮಾಡಿದರೆ ಎಲ್ಲವನ್ನೂ ಮಟ್ಟಹಾಕಬಹುದು ಎಂದಿದ್ದಾರೆ.

ಡ್ರಗ್ಸ್ ಮುಕ್ತಮಾಡಲು ವ್ಯಸನಿ ವಿಚಾರಣೆ ಮಾಡಿದರೆ ಮೂಲ ಮಾಹಿತಿ ಸಿಗುತ್ತದೆ. ಪೆಡ್ಲರ್​ ವಿಚಾರಣೆ ‌ಮಾಡಿದರೆ ಎಲ್ಲಿಂದ ಡ್ರಗ್ಸ್​ ಬಂತು ಅಂತಾ ಗೊತ್ತಾಗುತ್ತೆ‌. ಅಪರಾಧದಲ್ಲಿ ಭಾಗಿಯಾದ ವಿದೇಶಿಯರನ್ನು ಅವರ ದೇಶಕ್ಕೆ ವಾಪಸ್ ಕಳಿಸುವ ಕೆಲಸ ಮಾಡುತ್ತೇವೆ. ಪಿಐ, ಪಿಎಸ್​​ಐ ಸೇರಿ ಎಲ್ಲರ ಮೇಲೂ ಹಿರಿಯ ಅಧಿಕಾರಿಗಳು ನಿಗಾ ವಹಿಸಬೇಕು. ಮಹಾರಾಷ್ಟ್ರದ ಪೊಲೀಸರು ಬಂದು ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಮಾಡಿದ್ದಾರೆ. ಅದನ್ನು ಕರ್ನಾಟಕ ಪೊಲೀಸರು ಏಕೆ ಮಾಡುತ್ತಿಲ್ಲ. ಈ ರೀತಿ ಇನ್ಮುಂದೆ ಆಗಬಾರದು ಅಂತಾ ಪೊಲೀಸರಿಗೆ ತಿಳಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button