ಡಿಜಿಪಿ ಸಮವಸ್ತ್ರದಲ್ಲಿರುವಾಗಲೇ, ಸರಕಾರಿ ಕಚೇರಿಯನ್ನೇ ದುರ್ಬಳಕೆ ಮಾಡಿ ಮಹಿಳೆ ಜೊತೆ ಸರಸವಾಡ್ತಿರುವ ವಿಡಿಯೋ ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲೆಡೆ ವೈರಲ್ ಆದ ಹಿನ್ನೆಲೆ ಅಮಾನತುಗೊಳಿಸಲಾಗಿದೆ.
ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ವಿರುದ್ಧ ವಕೀಲ ನರೇಶ್ ಕುಮಾರ್ ಅವರು ಗಂಭೀರ ಸ್ವರೂಪದ ಆರೋಪಗಳನ್ನು ಮಾಡಿದ್ದು, ಈ ಸಂಬಂಧ ರಾಜ್ಯ ಮಹಿಳಾ ಆಯೋಗಕ್ಕೆ ವಕೀಲ ನರೇಶ್ ಕುಮಾರ್ ದೂರು ನೀಡಿದ್ದಾರೆ.
ಡಿಜಿಪಿ ರಾಮಚಂದ್ರ ರಾವ್ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿರುವ ವಕೀಲ ನರೇಶ್, “ಸರ್ಕಾರಿ ಕಚೇರಿಗಳನ್ನು ಇವರು ‘ಓಯೋ ರೂಂ’ ಗಳನ್ನಾಗಿ ಪರಿವರ್ತಿಸಿಕೊಂಡಿದ್ದಾರೆ,” ಎಂದು ಕಿಡಿಕಾರಿದ್ದಾರೆ.
ಮಹಿಳಾ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ವಕೀಲರು ತೀಕ್ಷ್ಣ ಪ್ರಶ್ನೆಗಳನ್ನು ಎತ್ತಿದ್ದಾರೆ. “ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳು ಕಚೇರಿಯಲ್ಲಿ ಬರೀ ರೊಮ್ಯಾನ್ಸ್ ಮಾಡುತ್ತಾ ಕಾಲ ಕಳೆದರೆ, ರಾಜ್ಯದ ಸಾಮಾನ್ಯ ಜನರಿಗೆ ಭದ್ರತೆ ಒದಗಿಸುವವರು ಯಾರು?” ಎಂದು ಅವರು ಪ್ರಶ್ನಿಸಿದ್ದಾರೆ.
ಸಾರ್ವಜನಿಕ ಸೇವೆಯಲ್ಲಿರಬೇಕಾದ ಸರ್ಕಾರಿ ಕಚೇರಿಗಳ ಪಾವಿತ್ರ್ಯತೆಯನ್ನು ಹಾಳುಮಾಡಲಾಗುತ್ತಿದೆ ಎಂದು ಆರೋಪಿಸಿರುವ ನರೇಶ್ ಕುಮಾರ್, ಇಂತಹ ‘ಹೆಣ್ಣುಬಾಕ’ರ ( ವಿರುದ್ಧ ಕೂಡಲೇ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮಹಿಳಾ ಆಯೋಗವನ್ನು ಒತ್ತಾಯಿಸಿದ್ದಾರೆ.
ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮತ್ತು ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥ ಅಧಿಕಾರಿಯ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ವಕೀಲರು ಪಟ್ಟು ಹಿಡಿದಿದ್ದಾರೆ.ಡಿಜಿಪಿ ಸಮವಸ್ತ್ರದಲ್ಲಿರುವಾಗಲೇ, ಸರಕಾರಿ ಕಚೇರಿಯನ್ನೇ ದುರ್ಬಳಕೆ ಮಾಡಿ ಮಹಿಳೆ ಜೊತೆ ಸರಸವಾಡ್ತಿರುವ ವಿಡಿಯೋ ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲೆಡೆ ವೈರಲ್ ಆದ ಹಿನ್ನೆಲೆ ಅಮಾನತುಗೊಳಿಸಲಾಗಿದೆ.
ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ವಿರುದ್ಧ ವಕೀಲ ನರೇಶ್ ಕುಮಾರ್ ಅವರು ಗಂಭೀರ ಸ್ವರೂಪದ ಆರೋಪಗಳನ್ನು ಮಾಡಿದ್ದು, ಈ ಸಂಬಂಧ ರಾಜ್ಯ ಮಹಿಳಾ ಆಯೋಗಕ್ಕೆ ವಕೀಲ ನರೇಶ್ ಕುಮಾರ್ ದೂರು ನೀಡಿದ್ದಾರೆ.
ಡಿಜಿಪಿ ರಾಮಚಂದ್ರ ರಾವ್ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿರುವ ವಕೀಲ ನರೇಶ್, “ಸರ್ಕಾರಿ ಕಚೇರಿಗಳನ್ನು ಇವರು ‘ಓಯೋ ರೂಂ’ ಗಳನ್ನಾಗಿ ಪರಿವರ್ತಿಸಿಕೊಂಡಿದ್ದಾರೆ,” ಎಂದು ಕಿಡಿಕಾರಿದ್ದಾರೆ.
ಮಹಿಳಾ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ವಕೀಲರು ತೀಕ್ಷ್ಣ ಪ್ರಶ್ನೆಗಳನ್ನು ಎತ್ತಿದ್ದಾರೆ. “ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳು ಕಚೇರಿಯಲ್ಲಿ ಬರೀ ರೊಮ್ಯಾನ್ಸ್ ಮಾಡುತ್ತಾ ಕಾಲ ಕಳೆದರೆ, ರಾಜ್ಯದ ಸಾಮಾನ್ಯ ಜನರಿಗೆ ಭದ್ರತೆ ಒದಗಿಸುವವರು ಯಾರು?” ಎಂದು ಅವರು ಪ್ರಶ್ನಿಸಿದ್ದಾರೆ.
ಸಾರ್ವಜನಿಕ ಸೇವೆಯಲ್ಲಿರಬೇಕಾದ ಸರ್ಕಾರಿ ಕಚೇರಿಗಳ ಪಾವಿತ್ರ್ಯತೆಯನ್ನು ಹಾಳುಮಾಡಲಾಗುತ್ತಿದೆ ಎಂದು ಆರೋಪಿಸಿರುವ ನರೇಶ್ ಕುಮಾರ್, ಇಂತಹ ‘ಹೆಣ್ಣುಬಾಕ’ರ ( ವಿರುದ್ಧ ಕೂಡಲೇ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮಹಿಳಾ ಆಯೋಗವನ್ನು ಒತ್ತಾಯಿಸಿದ್ದಾರೆ.
ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮತ್ತು ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥ ಅಧಿಕಾರಿಯ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ವಕೀಲರು ಪಟ್ಟು ಹಿಡಿದಿದ್ದಾರೆ.