ಧಾರವಾಡ ಹೊರವಲಯದಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ..
ತ್ಯೆಯಾದ ಯುವತಿಯನ್ನು ಧಾರವಾಡ ನಗರದ ಗಾಂಧಿಚೌಕ್ ನಿವಾಸಿ ಝಕೀಯಾ (20) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಮನೆಯಿಂದ ಲ್ಯಾಬ್‌ಗೆ ಹೋಗಿ ಬರುವುದಾಗಿ’ ಹೇಳಿ ಹೊರಟಿದ್ದ ಝಕೀಯಾ ರಾತ್ರಿಯಾದರೂ ಮನೆಗೆ ಮರಳಿರಲಿಲ್ಲ. ಇಂದು ಬೆಳಿಗ್ಗೆ ಧಾರವಾಡ ಹೊರವಲಯದ ವಿನಯ ಡೈರಿಗೆ ಸಂಪರ್ಕಿಸುವ ಏಕಾಂತ ರಸ್ತೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.
ಆರೋಪಿಗಳು ಮೊದಲು ಯುವತಿಯ ಮುಖಕ್ಕೆ ಬಲವಾಗಿ ಹಲ್ಲೆ ನಡೆಸಿ, ವೇಲ್‌ನಿಂದ ಕುತ್ತಿಗೆಯನ್ನು ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಕೃತ್ಯ ನಡೆದ ಸ್ಥಳದಲ್ಲಿ ಸಂಘರ್ಷ ನಡೆದಿರುವ ಕುರುಹುಗಳು ಕಂಡುಬಂದಿವೆ. ಘಟನಾ ಸ್ಥಳಕ್ಕೆ ಧಾರವಾಡ ವಿದ್ಯಾಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ.


